



ಡೈಲಿ ವಾರ್ತೆ:22 ಜನವರಿ 2023


ಉಡುಪಿ: ಮನೆಯ ಮಹಡಿಯಿಂದ ಬಿದ್ದು ವ್ಯಕ್ತಿ ಮೃತ್ಯು
ಉಡುಪಿ: ನಗರದ ಕೋರ್ಟ್ ರಸ್ತೆಯಲ್ಲಿ ಮನೆಯ ಮಹಡಿ ರಿಪೇರಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕೆಳಗೆ ಬಿದ್ದು ಮೃತಪಟ್ಟ ಘಟನೆ ನಿನ್ನೆ ನಡೆದಿದೆ.
ರಾಮಕೃಷ್ಣ ಪಡಿಯಾರ್(64) ಮೃತ ದುರ್ದೈವಿ ಎಂದು ತಿಳಿಯಲಾಗಿದೆ.
ಮದುವೆಯಾಗದೆ ಒಬ್ಬಂಟಿಯಾಗಿ ವಾಸ ಮಾಡಿಕೊಂಡಿದ್ದ ಇವರು, ಮನೆಯ ಮಹಡಿಯ ರಿಪೇರಿ ಕೆಲಸ ಮಾಡುತ್ತಿದ್ದರು. ಈ ವೇಳೆ ಇವರು ಆಕಸ್ಮಿಕವಾಗಿ ಕೈ ಜಾರಿ ಕೆಳಗೆ ಬಿದ್ದರು ಎನ್ನಲಾಗಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡ ಇವರು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ