ಡೈಲಿ ವಾರ್ತೆ:23 ಜನವರಿ 2023

ಸಂಕೇಶ್ವರ: ಅಪರಿಚಿತ ವಾಹನ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಸಂಕೇಶ್ವರ : ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಸಂಕೇಶ್ವರ ನಗರದ ಹೊರವಲಯದ ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸೋಮವಾರ ರಾತ್ರಿ ನಡೆದಿದೆ.

ಮೃತಪಟ್ಟಿರುವ ವ್ಯಕ್ತಿಯ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಈ ಅಪಘಾತದಲ್ಲಿ ಬೈಕ್ ಸವಾರನ ದೇಹವು ಮೂರು ಭಾಗವಾಗಿ ತುಂಡರಿಸಿದಂತಾಗಿದೆ. ಬೈಕ್ ಗೆ ಢಿಕ್ಕಿ ಹೊಡೆದು ಪರಾರಿಯಾಗಿರುವ ಅಪರಿಚಿತ ವಾಹನ ಪತ್ತೆ ಹಚ್ಚಲು ಸಂಕೇಶ್ವರ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಸಂಕೇಶ್ವರ ಸಿಪಿಐ ಪ್ರಹ್ಲಾದ ಚೆನ್ನಗೇರಿ ಮತ್ತು ಪಿಎಸ್ ಐ ಶಿವರಾಜ್ ನಾಯಿಕವಾಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.