ಕಾರ್ಕಳ : ಗೋ ಕಳ್ಳರು ಪೋಲೀಸರ ಮೇಲೆಯೇ ಕಾರು ಹತ್ತಿಸಲು ಯತ್ನಿಸಿರುವ ಘಟನೆ ಕಾರ್ಕಳ ತಾಲೂಕಿನ ಮಾಳ ಹೆದ್ದಾರಿಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.

ಮಾಳ ಬಳಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ. ಈ ವೇಳೆ ಗೋವುಗಳನ್ನು ತುಂಬಿದ ಕಾರು ಮತ್ತು ರಕ್ಷಣೆ ಒದಗಿಸಲು ಬರುತಿದ್ದ ಬೈಕನ್ನು ರಸ್ತೆಗೆ ಬ್ಯಾರಿಕೇಡ್ ಅಡ್ಡ ಇಟ್ಟು ತಡೆಯಲು ಯತ್ನಿಸಿದ್ದಾರೆ. ಆ ವೇಳೆ ದುಷ್ಕರ್ಮಿಗಳು ಪೊಲೀಸರ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಪೊಲೀಸರು ಗಾಯಗೊಂಡರೂ ಗೋಕಳ್ಳರನ್ನು ಬೆನ್ನತ್ತಿದ್ದು, ಈ ವೇಳೆ ಗೋವು ತುಂಬಿದ್ದ ಕಾರು ಪರಾರಿಯಾಗಿದೆ. ಬೈಕ್ ಸವಾರ ಬಿದ್ದು ಗಾಯಗೊಂಡಿದ್ದು, ಆತನನ್ನು ಪೊಲಿಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಗ್ರಾಮಾಂತರ ಎಸ್ ಐ ತೇಜಸ್ವಿ ಹಾಗೂ ಒರ್ವ ಪೊಲೀಸರಿಗೆ ಗಾಯಗಳಾಗಿದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.