



ಡೈಲಿ ವಾರ್ತೆ:25 ಜನವರಿ 2023


ಕರಾವಳಿಯ ಯೋಧ ಭೋಪಾಲ್ ನಲ್ಲಿ ಹೃದಯಾಘಾತದಿಂದ ಮೃತ್ಯು
ಮಂಗಳೂರು: ಭೋಪಾಲ್ ನಲ್ಲಿ ಸಶಸ್ತ್ರ ಸೀಮಾ ಬಲ್ ನಲ್ಲಿ ಕರ್ತವ್ಯದಲ್ಲಿದ್ದ ಕರಾವಳಿ ಮೂಲದ ಯೋಧರೊಬ್ಬರಿ ಹೃದಯಾಘಾತಕ್ಕೆ ಬಲಿಯಾದ ಘಟನೆ ನಡೆದಿದೆ.
ಮಂಗಳೂರಿನ ಶಕ್ತಿನಗರ ನಿವಾಸಿ ಯೋಧ ಮುರಲೀಧರ ರೈ(37) ಹೃದಯಾಘಾತದಿಂದ ಸಾವನ್ನಪ್ಪಿದ್ದು ಅವರ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ತರಲಾಗಿದೆ.
ಮಧ್ಯಪ್ರದೇಶದ ಭೋಪಾಲದಲ್ಲಿ ಕರ್ತವ್ಯದಲ್ಲಿದ್ದು ಮಲಗಿದ್ದಾಗಲ್ಲೇ ಹೃದಯಾಘಾತದಿಂದ ಮುಂಜಾನೆ ಮುರಲೀಧರ ರೈ ಸಾವನ್ನಪ್ಪಿದ್ದರು. ಅವರ ಪಾರ್ಥಿವ ಶರೀರವನ್ನು ಮಂಗಳವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ತರಲಾಗಿದ್ದು ನಿಲ್ದಾಣ ಆವರಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಸರ್ಕಾರದ ವತಿಯಿಂದ ಗೌರವ ಸಲ್ಲಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿ ಗೌರವ ಸಲ್ಲಿಸಿದ್ದಾರೆ. ಆ ಬಳಿಕ ಎ.ಜೆ ಆಸ್ಪತ್ರೆಯ ಶವಗಾರಕ್ಕೆ ಮೃತ ಯೋಧನ ಪಾರ್ಥಿವ ಶರೀರ ರವಾನಿಸಲಾಗಿದೆ.