ಡೈಲಿ ವಾರ್ತೆ:25 ಜನವರಿ 2023

ಮಲೆಮಹದೇಶ್ವರ ಬೆಟ್ಟದ ಬಳಿ ಗುಜರಾತ್ ಪ್ರವಾಸಿಗರ ಬಸ್ ಪಲ್ಟಿ: 15ಕ್ಕೂ ಹೆಚ್ಚು ಮಂದಿಗೆ ಗಾಯ

ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ.

ಗುಜರಾತ್ ರಾಜ್ಯದ 50 ಪ್ರವಾಸಿಗರು ತಮಿಳುನಾಡು ರಾಜ್ಯದಿಂದ ಪಾಲಾರ್ ಮಾರ್ಗವಾಗಿ ಮಲೆಮಹದೇಶ್ವರ ಬೆಟ್ಟಕ್ಕೆ ಬಸ್‌ನಲ್ಲಿ ಬರುತ್ತಿರುವಾಗ ಬುಧವಾರ ಬೆಳಗ್ಗೆ 8 ಗಂಟೆ ಸುಮಾರಿನಲ್ಲಿ ಈ ಅಪಘಾತ ಸಂಭವಿಸಿದೆ.

ಮಲೆಮಹದೇಶ್ವರ ಬೆಟ್ಟದ ಎರಡನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಹಿಂದಕ್ಕೆ ವಾಲಿ ಪಲ್ಟಿಯಾಗಿದೆ. 15 ಜನರು ಗಾಯಗೊಂಡಿದ್ದು, ಮಲೆಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.