



ಡೈಲಿ ವಾರ್ತೆ:25 ಜನವರಿ 2023


ರವಿಶಂಕರ್ ಗುರೂಜಿ ತೆರಳುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ಚೆನ್ನೈ: ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕರಾದ ಶ್ರೀ ಶ್ರೀ ರವಿಶಂಕರ್ ಗುರೂಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ತಮಿಳುನಾಡಿನ ಈರೋಡ್ ಜಿಲ್ಲೆಯ ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶದ ಬುಡಕಟ್ಟು ಗ್ರಾಮವಾದ ಉಕಿನಿಯಂನಲ್ಲಿ ಬುಧವಾರ ಬೆಳಗ್ಗೆ ತುರ್ತು ಭೂಸ್ಪರ್ಶ ಮಾಡಿದೆ.
ಹವಾಮಾನ ವೈಪರೀತ್ಯದ ಪರಿಣಾಮ ಹೆಲಿಕಾಪ್ಟರ್ ಅನ್ನು ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಹೆಲಿಕಾಪ್ಟರ್‌ನಲ್ಲಿದ್ದ ರವಿಶಂಕರ್ ಗೂರೂಜಿ ಸೇರಿದಂತೆ ಪೈಲಟ್ ಹಾಗೂ ಇಬ್ಬರು ಸಹಾಯಕರು ಸುರಕ್ಷಿತವಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ರವಿಶಂಕರ್ ಗುರೂಜಿ ಅವರು ಬೆಂಗಳೂರಿನಿಂದ ಕಡಂಬೂರಿಗೆ ತೆರಳುತ್ತಿದ್ದರು.