ಡೈಲಿ ವಾರ್ತೆ: 27 ಜನವರಿ 2023

ಕುಂದಾಪುರ ವಕೀಲರ ಸಂಘದ ಆಶ್ರಯದಲ್ಲಿ ನ್ಯಾಯಾಂಗ ಇಲಾಖೆಯ ಸಹಯೋಗದೊಂದಿಗೆ ಗಣರಾಜ್ಯೋತ್ಸವ ಆಚರಣೆ

ಕುಂದಾಪುರ : ಕುಂದಾಪುರ ವಕೀಲರ ಸಂಘದ ಆಶ್ರಯದಲ್ಲಿ ನ್ಯಾಯಾಂಗ ಇಲಾಖೆಯ ಸಹಯೋಗದೊಂದಿಗೆ ಗಣರಾಜ್ಯೋತ್ಸವ ಕಾರ್ಯಕ್ರಮವು ಜ. 26 ರಂದು ನಡೆಯಿತು.

ಕುಂದಾಪುರದ ಹೆಚ್ಚುವರಿ ಜಿಲ್ಲಾ & ಸತ್ರ ನ್ಯಾಯಾಧೀಶರಾದ ಶ್ರೀ ಅಬ್ದುಲ್ ಹುಸೇನ್ ರಹೀಮ್ ಶೇಖ್ ಧ್ವಜಾರೋಹಣಾ ಮಾಡಿದರು.

ಕುಂದಾಪುರ ವಕೀಲರ ಸಂಘದ ಅಧ್ಯಕ್ಷರಾದ ಬನ್ನಾಡಿ ಸೋಮನಾಥ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಈ ಸಂದರ್ಭದಲ್ಲಿ ಕುಂದಾಪುರ ಹಿರಿಯ ಸಿವಿಲ್ ನ್ಯಾಯಾಧೀಶರಾ ರಾಜು ಎನ್ & ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಧನೇಶ್ ಮುಗಳಿ ಉಪಸ್ಥಿತರಿದ್ದರು.

ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಜೆ. ಶ್ರೀನಾಥ್ ರಾವ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಹೆಚ್. ಪ್ರಮೋದ ಹಂದೆ ವಂದಿಸಿದರು.
ವಕೀಲರ ಸಂಘದ ಸದಸ್ಯರು, ನ್ಯಾಯಾಲಯದ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಕುಂದಾಪುರ ಪೊಲೀಸರು ಗೌರವ ರಕ್ಷೆ ಸಲ್ಲಿಸಿದರು.