



ಡೈಲಿ ವಾರ್ತೆ: 29 ಜನವರಿ 2023


ಕನ್ನಡದ ಹಿರಿಯ ನಟ ಮನದೀಪ್ ರಾಯ್ ನಿಧನ
ಬೆಂಗಳೂರು: ಕನ್ನಡ ಚಿತ್ರರಂಗದ ಹಾಸ್ಯ ನಟ ಮನದೀಪ್ ರಾಯ್ (74) ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಇತ್ತೀಚೆಗೆ ಹೃದಯಾಘಾತವಾಗಿ ಆಸ್ಪತ್ರೆ ಸೇರಿದ್ದ ಮನದೀಪ್ ರಾಯ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಚೇತರಿಕೆ ಬಳಿಕ ಮನೆಗೆ ವಾಪಸ್ ಆಗಿದ್ದ ಅವರು ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ.
ರಂಗಭೂಮಿ ಕಲಾವಿದರೂ ಆಗಿದ್ದ ಮನದೀಪ್ ರಾಯ್ ಪೋಷಕ ಪಾತ್ರದಲ್ಲಿ ಖ್ಯಾತಿ ಪಡೆದಿದ್ದರು.