ಡೈಲಿ ವಾರ್ತೆ: 30 ಜನವರಿ 2023
ಅತ್ಯಾಚಾರ ಪ್ರಕರಣ: ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ದೋಷಿ
ಗಾಂಧಿನಗರ: 2013ರ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ದೋಷಿ ಎಂದು ಗಾಂಧಿನಗರ ಸೆಷನ್ಸ್ ಕೋರ್ಟ್ ಇಂದು(ಜ.30) ತೀರ್ಪು ನೀಡಿದೆ.
2013ರಲ್ಲಿ ಸೂರತ್ನ ಅಪ್ರಾಪ್ತ ಬಾಲಕಿಯೊಬ್ಬಳು ರಾಜಸ್ಥಾನದ ಆಶ್ರಮದಲ್ಲಿ ಅಸಾರಾಂ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿದ್ದಳು. ಈ ದೂರಿನ ಆಧಾರದಲ್ಲಿ ಆತನನ್ನು 2013ರ ಆಗಸ್ಟ್ 31ರಂದು ಬಂಧಿಸಲಾಗಿತ್ತು. 2018ರಲ್ಲಿ ಜೋಧ್ಪುರ ನ್ಯಾಯಾಲಯವು ನಗರದ ತನ್ನ ಆಶ್ರಮದಲ್ಲಿ 16 ವರ್ಷದ ಹುಡುಗಿಯ ಮೇಲೆ ಅತ್ಯಾಚಾರ ಎಸಗಿದ್ದಕ್ಕಾಗಿ 77 ವರ್ಷದ ಅಸಾರಾಂ ಬಾಪು ಸೇರಿ ನಾಲ್ವರು ಆರೋಪಿಗಳನ್ನು ತಪ್ಪಿತಸ್ಥರೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು.
2013ರ ಆಗಸ್ಟ್ 15ರಂದು ಅಸಾರಾಂ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಛಿಂದ್ವಾರದಲ್ಲಿರುವ ಅಸಾರಾಂ ಆಶ್ರಮದಲ್ಲಿ ಕಲಿಯುತ್ತಿದ್ದ ಉತ್ತರಪ್ರದೇಶದ ಷಹಜಹಾನ್ಪುರದ ಬಾಲಕಿ ದೂರು ನೀಡಿದ್ದಳು. ಈ ಪ್ರಕರಣದಲ್ಲಿ ಆಸಾರಾಂ ನನ್ನು ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣ ಇನ್ನಷ್ಟೇ ಪ್ರಕಟವಾಗಲಿದೆ.