ಡೈಲಿ ವಾರ್ತೆ: 31 ಜನವರಿ 2023

ಮುಂಬೈ – ಅಹಮದಾಬಾದ್ ಹೆದ್ದಾರಿಯಲ್ಲಿ ಕಾರು-ಬಸ್ಸು ನಡುವೆ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

ಮಹಾರಾಷ್ಟ್ರ: ಕಾರು, ಬಸ್ಸಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ – ಅಹಮದಾಬಾದ್ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.

ಐಷಾರಾಮಿ ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ. ಹೆದ್ದಾರಿಯ ಮಹಾಲಕ್ಷ್ಮೀ ಸೇತುವೆ ಬಳಿ ಬೆಳಗಿನ ಜಾವ 3.30ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಕಾಸ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾಲ್ವರು ಪ್ರಯಾಣಿಸುತ್ತಿದ್ದ ಕಾರು ಗುಜರಾತ್‌ನಿಂದ ಮುಂಬೈಗೆ ತೆರಳುತ್ತಿತ್ತು. ಹಿಂಬದಿಯಿಂದ ಬಸ್ಸಿಗೆ ಕಾರು ಡಿಕ್ಕಿ ಹೊಡೆದಿದೆ. ಈ ಸಂದರ್ಭ ಮಹಿಳೆ ಸೇರಿ ಕಾರಿನಲ್ಲಿದ್ದ ನಾಲ್ಕೂ ಮಂದಿ ಮೃತಪಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.