ಡೈಲಿ ವಾರ್ತೆ:01 ಫೆಬ್ರವರಿ 2023

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಎಸ್ಪಿಯಾಗಿ ವಿಕ್ರಮ್ ಅಮಾಟೆ

ದಕ್ಷಿಣ ಕನ್ನಡ: ಜಿಲ್ಲೆಯ ನೂತನ ಎಸ್ಪಿಯಾಗಿ ವಿಕ್ರಮ್ ಅಮಾತಟೆ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಈ ಹಿಂದಿನ ಜಿಲ್ಲಾ ಎಸ್ಪಿ ಸೋನಾವಣೆ ಋಷಿಕೇಶ್ ಭಗವಾನ್ ಅವರಿಗೆ ವರ್ಗಾವಣೆಯಾಗಿದ್ದು, ಇವರಿಗೆ ಗುಪ್ತಚರ ಇಲಾಖೆಯ ಎಸ್ಪಿಯಾಗಿ ನಿಯುಕ್ತಿಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.