ಡೈಲಿ ವಾರ್ತೆ:05 ಫೆಬ್ರವರಿ 2023
ಕಾಸರಗೋಡು: ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ : ಬಂಟ್ವಾಳ ನಿವಾಸಿ ಬಂಧನ
ಕಾಸರಗೋಡು: ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯವಾದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ನಿವಾಸಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ಬಿ.ಸಿ ರೋಡ್ ನ ಮುಹಮ್ಮದ್ ಇಬ್ರಾಹಿಂ ತೌಫಿಕ್ (23) ಬಂಧಿತ. ಇನ್ಸ್ಟಾಗ್ರಾಂ ಮೂಲಕ ಪರಿಚಯವಾದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾರ್ಥಿನಿ ಯೋರ್ವಳನ್ನು ಆಮಿಷ ತೋರಿಸಿ ವಿವಿಧೆಡೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದು, ಈ ಬಗ್ಗೆ ಲಭಿಸಿದ ದೂರಿನಂತೆ ತನಿಖೆ ನಡೆಸಿದ ಮಂಜೇಶ್ವರ ಪೊಲೀಸರು ತೌಫಿಕ್ ನನ್ನು ಬಂಧಿಸಿದ್ದಾರೆ.