



ಡೈಲಿ ವಾರ್ತೆ:07 ಫೆಬ್ರವರಿ 2023


ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಪತಿ..!
ಗದಗ: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಡಲಿಯಿಂದ ಬರ್ಬರವಾಗಿ ಕೊಲೆಗೈದ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಬೇವಿನಕಟ್ಟಿ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.
ವಿದ್ಯಾ ಮೌನೇಶ ಆಡಿನ (24 ವ) ಕೊಲೆಯಾಗಿರುವ ದುರ್ದೈವಿ. ಮೌನೇಶ ಆಡಿನ ತನ್ನ ಹೆಂಡತಿಯನ್ನು ಕೊಡಲಿಗಿಂದ ಕೊಚ್ಚಿ ಕೊಲೆ ಮಾಡಿದ ಆರೋಪಿ.
ಕೊಲೆಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.