ಡೈಲಿ ವಾರ್ತೆ:07 ಫೆಬ್ರವರಿ 2023

ಹೊನ್ನಾವರ: ಪೊಲೀಸ್ ಸಿಬ್ಬಂದಿಯೋರ್ವ ನೇಣುಬಿಗಿದು ಆತ್ಮಹತ್ಯೆ!



ಹೊನ್ನಾವರ: ತಾಲೂಕಿನ ಕಾಸರಕೋಡ ಇಕೋ ಬೀಚ್ ಬಳಿ ಕುಂದಾಪುರ ಪೊಲೀಸ್ ಪೇದೆಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ರಾಮ ಗೌಡ (32) ಆತ್ಮಹತ್ಯೆ ಮಾಡಿಕೊಂಡಿರುವ ಸಿಬ್ಬಂದಿ. ಕುಮಟಾ ತಾಲೂಕಿನ ಗೋಕರ್ಣ ಹತ್ತಿರದ ನಾಡುಮಾಸ್ಕೇರಿ ಮೂಲದವರಾಗಿರುವ ಇವರು, 2017ರಲ್ಲಿ ಪೊಲೀಸ್ ಇಲಾಖೆಗೆ ನೇಮಕಗೊಂಡಿದ್ದರು. ಈತ ಆನ್ಲೈನ್ ಜೂಜಿಗಾಗಿ ಸಾಲ ಮಾಡಿಕೊಂಡಿದ್ದ ಎನ್ನಲಾಗಿದ್ದು, ಇದೇ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಕೇಸರಿ ಬಣ್ಣದ ಶರ್ಟ್ ಹಾಗೂ ಕಪ್ಪು ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಸಮೀಪದಲ್ಲಿ ಬ್ಯಾಗ್ ದೊರೆತಿದೆ. ಸ್ಥಳಕ್ಕೆ ಪಿಎಸೈ ಪ್ರವೀಣಕುಮಾರ ಹಾಗೂ ಆರ್.ಎಫ್.ಓ ವಿಕ್ರಂ ರೆಡ್ಡಿ, ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.