ಡೈಲಿ ವಾರ್ತೆ:11 ಫೆಬ್ರವರಿ 2023
ಉಳ್ಳಾಲ :ಶಾರ್ಟ್ ಸರ್ಕ್ಯೂಟ್ ನಿಂದ ಫಾಸ್ಟ್ ಫುಡ್ ಅಂಗಡಿ ಬೆಂಕಿಗಾಹುತಿ
ಉಳ್ಳಾಲ: ಆಕಸ್ಮಿಕ ಬೆಂಕಿ ಉಂಟಾಗಿ ಫಾಸ್ಟ್ ಫುಡ್ ಅಂಗಡಿ ಸುಟ್ಟು ಕರಕಲಾದ ಘಟನೆ ಕುಂಪಲ ಬಾಲಕೃಷ್ಣ ಮಂದಿರದ ಬಳಿ ಶನಿವಾರ ಮುಂಜಾನೆ ನಡೆದಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಅಂಗಡಿಗೆ ಬೆಂಕಿ ತಗಲಿರುವುದಾಗಿ ಶಂಕಿಸಲಾಗಿದೆ.
ಬೆಂಕಿ ಅನಾಹುತದಲ್ಲಿ ಅಂಗಡಿಯೊಳಗಿದ್ದ ರೆಫ್ರಿಜರೇಟರಿನ ಗ್ಯಾಸ್ ಸಿಲಿಂಡರ್ ಸಿಡಿದಿದ್ದು, ಕಟ್ಟಡದ ಗೋಡೆ ಬಿರುಕು ಬಿಟ್ಟಿದೆ. ಸ್ಥಳೀಯರೇ ಸೇರಿ ತಕ್ಷಣ ಬೆಂಕಿಯನ್ನು ನಂದಿಸಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ ವ್ಯಾಪಿಸದಂತೆ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆಯಿಂದ ಒಂದು ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಕುಂಪಲ ಆಶ್ರಯ ಕಾಲನಿಯ ನಿವಾಸಿಗಳು ಸ್ನೇಹಿತೆಯರಾದ ಮೋಹಿನಿ ಮತ್ತು ದೀಕ್ಷಿತ ಜತೆಯಾಗಿ ಸಂಜೆ ಹೊತ್ತಲ್ಲಿ ಫಾಸ್ಟ್ ಫುಡ್ ವ್ಯಾಪಾರ ನಡೆಸುತ್ತಿದ್ದರು.
ಈ ವ್ಯಾಪಾರದಲ್ಲೇ ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದ ಸ್ನೇಹಿತೆಯರೀಗ ಬೀದಿಗೆ ಬಿದ್ದಿದ್ದು, ಮೋಹಿನಿ ಮತ್ತು
ದೀಕ್ಷಾ ಕಣ್ಣೀರಿಟ್ಟರು.
ಸೋಮೇಶ್ವರ ಪುರಸಭಾ ಅಧಿಕಾರಿಗಳು ಮತ್ತು ಉಳ್ಳಾಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.