



ಡೈಲಿ ವಾರ್ತೆ:12 ಫೆಬ್ರವರಿ 2023


ಉಪ್ಪೂರು: ಬೈಕ್ ಹಾಗೂ ಎರಡು ಲಾರಿಗಳ ನಡುವೆ ಭೀಕರ ಸರಣಿ ಅಪಘಾತ, ಇಬ್ಬರಿಗೆ ಗಂಭೀರ ಗಾಯ!

ಉಡುಪಿ: ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಸವಾರನನ್ನು ತಪ್ಪಿಸಲು ಹೋದ ಲಾರಿಗೆ ಹಿಂದಿನಿಂದ ಬಂದ ಇನ್ನೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಸಂಜೆ ನಡೆದಿದೆ.
ಈ ಅಪಘಾತದಲ್ಲಿ ಬೈಕ್ ಸವಾರನು ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ.
ಅಲ್ಲದೆ ಗಾಯಗೊಂಡ ಲಾರಿ ಚಾಲಕನನ್ನು ಕುಮಟದ ಕದಗಲ್ ಮೂಲದ ಮಹೇಶ್ ಗೌಡ ಎಂದು ಗುರುತಿಸಲಾಗಿದೆ. ರಸ್ತೆಗೆ ಬಿದ್ದ ಬೈಕ್ ಸವಾರನನ್ನು ತಪ್ಪಿಸಲು ಹೋದ ಲಾರಿಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿಹೊಡೆದು, ರಸ್ತೆ ಬದಿಯ ದಾರಿದೀಪದ ಕಂಬಕ್ಕೆ ಡಿಕ್ಕಿಯಾಗಿದೆ. ಇದರ ಪರಿಣಾಮ ಲಾರಿಯ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರ ಹಾಗೂ ಲಾರಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಪರಿಣಾಮ ಉಪ್ಪೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಅರ್ಧ ತಾಸುಕ್ಕಿಂತಲೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಯಿತು.