ಡೈಲಿ ವಾರ್ತೆ:14 ಫೆಬ್ರವರಿ 2023

ಕೆಎಎಸ್ ಅಧಿಕಾರಿ ರೇಷ್ಮಾ ತಾಳಿಕೋಟೆ ಪತಿ ಜಾಫರ್ ಆತ್ಮಹತ್ಯೆ

ಬೆಳಗಾವಿ:ಕೆಎಎಸ್ ಅಧಿಕಾರಿ ರೇಷ್ಮಾ ತಾಳಿಕೋಟಿ ಅವರ ಪತಿ ಜಾಫರ್ ಫಿರ್ಜಾದೆ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

39 ವರ್ಷದ ಜಾಫರ್ ಫಿರ್ಜಾದೆ ಬೆಳಗಾವಿಯ ಆಜಂ ನಗರದಲ್ಲಿರುವ ತಮ್ಮ ಸಹೋದರನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.ಜಾಫರ್ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಎಫ್ ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಹಿಡಕಲ್ ಡ್ಯಾಂ ಭೂ ಸ್ವಾಧೀನಾಧಿಕಾರಿಯಾಗಿರುವ ರೇಷ್ಮಾ ತಾಳಿಕೋಟಿ ಅವರು ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ಸಂದರ್ಭದಲ್ಲಿ ಜಾಫರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜಾಫರ್ ಅವರು ಕಳೆದ ಕೆಲವು ತಿಂಗಳಿನಿಂದ ಕಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಶೇಖರ್ ಅವರು ಹೇಳಿದ್ದಾರೆ.