



ಡೈಲಿ ವಾರ್ತೆ:14 ಫೆಬ್ರವರಿ 2023


ಇಬ್ಬರ ಪ್ರಾಣ ತೆಗೆದಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಕೊಡಗಿನ ಜನ

ಕೊಡಗು: ಕಳೆದ ಎರಡು ದಿನಗಳ ಹಿಂದೆ ಇಬ್ಬರನ್ನು ಬಲಿ ಪಡೆದು ಕೊಡಗಿನ ಜನತೆಯ ನಿದ್ದೆಗೆಡಿಸಿದ್ದ ವ್ಯಾಘ್ರವನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಜಾನುವಾರುಗಳನ್ನು ಭಕ್ಷಿಸಿ ಅರಣ್ಯ ಇಲಾಖೆಯ ಕಣ್ಣಿಗೆ ಸಿಗದೆ ಕಣ್ಮರೆಯಾಗಿದ್ದ ಹುಲಿ ಎರಡು ದಿನಗಳ ಹಿಂದೆಯಷ್ಟೇ ಕೆ.ಬಾಡಗ ಗ್ರಾಮದಲ್ಲಿ ಇಬ್ಬರ ಮೇಲೆ ದಾಳಿ ಮಾಡಿ ಕೊಂದಿತ್ತು ಇದರಿಂದ ಭಯಗೊಂಡ ಗ್ರಾಮಸ್ಥರು ಹುಲಿಯನ್ನು ಕೊಲ್ಲುವಂತೆ ಆಕ್ರೋಶ ವ್ಯಕ್ತಪಡಿಸಿದ್ದರು ಅಲ್ಲದೆ ಸರಕಾರಕ್ಕೂ ಮನವಿಯನ್ನು ಸಲ್ಲಿಸಿದ್ದರು. ಅದರಂತೆ ಹುಲಿಯ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ ಮಂಗಳವಾರ ದಕ್ಷಿಣ ಕೊಡಗಿನ ಕುಟ್ಟ ಗ್ರಾಮದ ನಾಣಚ್ಚಿ ಜೀವಂತವಾಗಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.