ಡೈಲಿ ವಾರ್ತೆ:15 ಫೆಬ್ರವರಿ 2023

ಆರೂರು 516ನೇ ನಮ್ಮೂರ ನಮ್ಮ ಕೆರೆ ಪುನಶ್ಚೇತನ ರತ್ನಾಕರ ಭಟ್‌ ಚಾಲನೆ: ಪರಿಸರ ಸಂರಕ್ಷಿಸುವ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಿ

ಆರೂರು(ಬ್ರಹ್ಮಾವರ) :ನಮ್ಮ ಪರಿಸರ, ನೆಲ ಜಲದ ಮಹತ್ವವನ್ನು ಮಕ್ಕಳಿಗೆ ಚಿಕ್ಕಂದಿನಿಂದಲೇ ತಿಳಿಸಿ ಅವರಲ್ಲಿ ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದು ಆರೂರು ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ರತ್ನಾಕರ ಭಟ್‌ಹೇಳಿದರು.
ಆರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲುಂಜೆಯಲ್ಲಿ ಮಂಗಳವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಬ್ರಹ್ಮಾವರ ತಾಲ್ಲೂಕು, ಆಲುಂಜೆ ಕೆರೆ ಅಭಿವೃದ್ಧಿ ಸಮಿತಿ, ಆರೂರು ಗ್ರಾಮ ಪಂಚಾಯಿತಿಯ ಸಹಭಾಗಿತ್ವದಲ್ಲಿ 516ನೇ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿಯಲ್ಲಿ ಆಲುಂಜೆ ಕೆರೆಯ ಮನಶ್ವೇತನ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.


ಇದಕ್ಕೂ ಮುನ್ನ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ದಿನೇಶ್‌ಪ್ರಾಸ್ತಾವಿಕವಾಗಿ ಮಾತನಾಡಿ  ಕೃಷಿ ಭೂಮಿಗೆ ಯೋಗ್ಯ, ಅಂತರ್ಜಲ ಹೆಚ್ಚಿಸುವ ನಿಟ್ಟಿನಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಳೆದ ೨೦೧೯ರಿಂದ ಕೆರೆಗಳನ್ನು ಪುನಶ್ಚೇತನಗೊಳಿಸುವ ಕಾರ್ಯ ಆಗುತ್ತಿದೆ. ಈಗಾಗಲೇ ಬ್ರಹ್ಮಾವರ ವಲಯದ ವಂಡಾರು, ಬಾರ್ಕೂರು ಮತ್ತು ಕೋಟದಲ್ಲಿ ಕೆರೆಗಳ ಹೂಳೆತ್ತುವ ಕೆಲಸ ಮಾಡಿ ಪುನಶ್ಚೇತನ ಮಾಡಲಾಗಿದೆ ಎಂದು ತಿಳಿಸಿದರು.
 ಕೆರೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಐವನ್ ಡಿ’ಸೋಜ ಅಧ್ಯಕ್ಷತೆ ವಹಿಸಿದ್ದರು.


ಯೋಜನೆಯ ವಲಯಾಧಿಕಾರಿ ಹರೀಶ್‌, ಆರೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಮತಾ ಸಂತೋಷ್‌ಶೆಟ್ಟಿ, ಪಿಡಿಓ ಸುಭಾಷ್‌, ಗ್ರಾಮ ಲೆಕ್ಕಿಗ ಭರತ್‌ಶೆಟ್ಟಿ, ಕಾರ್ಯದರ್ಶಿ ಆನಂದ್‌, ಯೋಜನೆಯ ಬ್ರಹ್ಮಾವರ ವಲಯದ ಅಧ್ಯಕ್ಷೆ ಆಶಾ ಅಡಿಗ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ನಳಿನಿ ಪ್ರದೀಪ್‌ರಾವ್‌, ಪಂಚಾಯಿತಿ ಸದಸ್ಯ ರತ್ನಾಕರ ಶೆಟ್ಟಿ, ಸಂತೋಷ್‌ಇದ್ದರು.
ಯೋಜನೆಯ ಸೇವಾ ಪ್ರತಿನಿಧಿ ಜ್ಯೋತಿ ಸ್ವಾಗತಿಸಿದರು. ಕೃಷಿ ಅಧಿಕಾರಿ ರಾಜೇಂದ್ರ ಕಾರ್ಯಕ್ರಮ ನಿರೂಪಿಸಿದರು.