



ಡೈಲಿ ವಾರ್ತೆ:16 ಫೆಬ್ರವರಿ 2023


ಕಲುಷಿತ ನೀರು ಸೇವಿಸಿ ಮಹಿಳೆ ಸಾವು
ತೆಲಂಗಾಣ: ಕಲುಷಿತ ನೀರು ಸೇವಿಸಿ ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಅನಪುರ ಗ್ರಾಮದಲ್ಲಿ ನಡೆದಿದೆ.
ಸಾವಿತ್ರಮ್ಮ (35) ಮೃತರು.ಇವರು ತೆಲಂಗಾಣದ ನಾರಾಯಣಪೇಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.
ಗ್ರಾಮಕ್ಕೆ ನೀರು ಪೂರೈಸುವ ಪೈಪ್ ನಲ್ಲಿ ಚರಂಡಿ ನೀರು ಸೇರ್ಪಡೆಯಾಗಿ ನೀರು ಕಲುಷಿತವಾಗಿದ್ದು, ಇದನ್ನು ಸೇವಿಸಿದ
30 ಜನರಲ್ಲಿ ವಾಂತಿ ಬೇಧಿ ಕಾಣಿಸಿಕೊಂಡಿತ್ತು.ಇವರಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದಾರೆ.
ಅಸ್ವಸ್ಥಗೊಂಡ ಎಲ್ಲಾ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುವುದು.ಕಾರಣವಾದ ಅಂಶಗಳ ಬಗ್ಗೆ ಕೂಡ ತನಿಖೆ ನಡೆಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಗುರುರಾಜ ಹಿರೇಗೌಡರ್ ಹೇಳಿದ್ದಾರೆ.