



ಡೈಲಿ ವಾರ್ತೆ:19 ಫೆಬ್ರವರಿ 2023


ದಕ್ಷಿಣ ಕನ್ನಡ : ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ
ಉಳ್ಳಾಲ: ಕೀಟನಾಶಕ ಸೇವಿಸಿ ಪಿಯುಸಿ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಪಲದಲ್ಲಿ ನಡೆದಿದೆ.
ಧನ್ಯಾ(17) ಮೃತ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.
ಧನ್ಯಾ ತಾಯಿ ಉಪ್ಪಿನಕಾಯಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಫೆ.14ರಂದು ಮಧ್ಯಾಹ್ನ ಮನೆಗೆ ಬಂದಾಗ ಕಾಲೇಜಿಗೆ ರಜೆಯಲ್ಲಿದ್ದ ಪುತ್ರಿ ಧನ್ಯಾ ಹೊರಗಡೆ ಹೋಗಿರುವುದನ್ನು ಕಂಡು ಗದರಿಸಿದ್ದಾರೆ. ಇದರಿಂದ ಮನನೊಂದು ಧನ್ಯಾ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.
ಆದರೆ ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.