ಡೈಲಿ ವಾರ್ತೆ:20 ಫೆಬ್ರವರಿ 2023

ಚಿಕ್ಕಮಗಳೂರು: ಹಾಡಹಗಲೇ ಬೈಕ್ ಸವಾರರಿಬ್ಬರನ್ನು ಕೋವಿಯಿಂದ ಗುಂಡಿಕ್ಕಿ ಹತ್ಯೆ

ಚಿಕ್ಕಮಗಳೂರು: ಹಾಡಹಗಲೇ ಬೈಕ್ ಸವಾರರಿಬ್ಬರನ್ನು ಕೋವಿಯಿಂದ ಗುಂಡಿಕ್ಕಿ ಹತ್ಯೆಗೈದ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೆಹೊನ್ನೂರು ಸಮೀಪದ ಚಂದ್ರುಳ್ಳಿಬಿದರೆ ಎಂಬಲ್ಲಿ ಸೋಮವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ.

ಬಾಳೆಹೊನ್ನೂರು ಗ್ರಾಮದ ಹಳ್ಳಿಬೈಲು ನಿವಾಸಿಗಳಾದ ಪ್ರಕಾಶ್(28) ಮತ್ತು ಪ್ರವೀಣ್(30) ಹತ್ಯೆಯಾದವರು. ಕೊಲೆ ಆರೋಪಿಯನ್ನು ಚಿಕ್ಕಮಗಳೂರು ತಾಲೂಕಿನ ಉಜ್ಜಯಿನಿ ಗ್ರಾಮದ ರಮೇಶ್ ಎಂದು ಗುರುತಿಸಲಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಕೃತ್ಯಕ್ಕೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಬಾಳೆಹೊನ್ನೂರು ಠಾಣೆಯ ಪೊಲೀಸರು ಆಗಮಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.