ಡೈಲಿ ವಾರ್ತೆ:22 ಫೆಬ್ರವರಿ 2023

ಇಂದು ಬಿಜೆಪಿ ಸೇರಲಿದ್ದಾರೆ ಹಿರಿಯ ನಟ ಅನಂತ್ ನಾಗ್

ಬೆಂಗಳೂರು: ಹಿರಿಯ ನಟ ಮತ್ತು ಮಾಜಿ ಸಚಿವ ಅನಂತ್ ನಾಗ್ ಅವರು ಇಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

ಮಲ್ಲೇಶ್ವರಂ ಬಿಜೆಪಿ (BJP) ಕಚೇರಿಯಲ್ಲಿ ಸಂಜೆ 4.30ಕ್ಕೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಸಚಿವ ಮುನಿರತ್ನ, ಡಾ‌. ಸುಧಾಕರ್ ಹಾಗೂ ಇತರ ನಾಯಕರು ಕಾರ್ಯಕ್ರದಲ್ಲಿ ಹಾಜರಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಹಿಂದೆ ಜೆ.ಎಚ್. ಪಟೇಲ್ ಸರ್ಕಾರದಲ್ಲಿ ಅನಂತ್ ನಾಗ್ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದರು. 2004ರಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು.