ಡೈಲಿ ವಾರ್ತೆ:23 ಫೆಬ್ರವರಿ 2023

ಮಂಗಳೂರು: ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನ ಢಿಕ್ಕಿ, ಸವಾರ ಮೃತ್ಯು!

ಉಳ್ಳಾಲ:ಕೆಟ್ಟು ನಿಂತಿದ್ದ ಲಾರಿಗೆ ಎರಡು ಸ್ಕೂಟರ್ ಗಳು ಢಿಕ್ಕಿ ಹೊಡೆದು ಒಂದು ಸ್ಕೂಟರಿನಲ್ಲಿದ್ದ ಸವಾರ ಸಾವನ್ನಪ್ಪಿ ಸಹಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಅಂಗರಗುಂಡಿ ನಿವಾಸಿ ಮೊಹಮ್ಮದ್ ನೌಫಾಲ್ (26)ಮೃತ ಯುವಕ. ಸಹಸವಾರ ಉಮ್ಮರ್ ಫಾರುಕ್ ಎಂಬವರು ಗಾಯಗೊಂಡಿದ್ದಾರೆ.

ಕಲ್ಲಾಪು ಮಾರುಕಟ್ಟೆಗೆ ಪಂಪ್ವೆಲ್ ಕಡೆಯಿಂದ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಈ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.