ಡೈಲಿ ವಾರ್ತೆ:23 ಫೆಬ್ರವರಿ 2023

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸುಟ್ಟು ಕರಕಲಾದ ಪೊಲೀಸ್ ಜೀಪ್: ಚಾಲಕ ಪಾರು

ಕಾಸರಗೋಡು: ಪೊಲೀಸ್ ಜೀಪೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸುಟ್ಟು ಕರಕಲಾದ ಘಟನೆ ಕಾಸರಗೋಡಿನ ಉದಯಗಿರಿಯಲ್ಲಿ ನಡೆದಿದೆ.

ವಿದ್ಯಾನಗರ ಪೊಲೀಸ್ ಠಾಣೆಯ ಬೊಲೆರೋ ಜೀಪು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸುಟ್ಟು ಕರಕಲಾಗಿದ್ದು, ಚಾಲಕ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ಜೀಪಿಗೆ ತಗುಲಿದ್ದ ಬೆಂಕಿ ನಂದಿಸಿದೆ.

ಇಂದು ಬೆಳಗ್ಗೆ ಗಸ್ತು ತಿರುಗಿ ಹಿಂದಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಜೀಪಿನಲ್ಲಿ ಚಾಲಕ ಮಾತ್ರ ಇದ್ದರು ಎನ್ನಲಾಗಿದೆ. ಅಪಘಾತ ಸಂಭವಿಸಿದ ಕೂಡಲೇ ಚಾಲಕ ಹೊರಬಂದಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.