ಡೈಲಿ ವಾರ್ತೆ:24 ಫೆಬ್ರವರಿ 2023

ನಟ ಉಪೇಂದ್ರ ಪಕ್ಷಕ್ಕೆ ”ಆಟೋ ರಿಕ್ಷಾ”ಚಿಹ್ನೆ ನೀಡಿದ ಚುನಾವಣಾ ಆಯೋಗ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಈ ನಡುವೆ ಕನ್ನಡದ ರಿಯಲ್ ಸ್ಟಾರ್ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷಕ್ಕೆ ಆಟೋ ರಿಕ್ಷಾ ಚಿಹ್ನೆ ಲಭಿಸಿದೆ.

ಈ ಕುರಿತು ಚುನಾವಣಾ ಆಯೋಗ ಆದೇಶ ಹೊರಡಿಸಿದ್ದು, ಉಪೇಂದ್ರ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಉತ್ತಮ ಪ್ರಜಾಕೀಯ ಪಕ್ಷಕ್ಕೆ ಈ ಬಾರಿಯ 2023 ವಿಧಾನಸಭಾ ಚುನಾವಣೆಗೆ ಕಾಮನ್ ಸಿಂಬಲ್ “ಆಟೋ ರಿಕ್ಷಾ ” ಚಿಹ್ನೆ ಲಭಿಸಿದೆ. ಎಲ್ಲರಿಗೂ ಶುಭಾಶಯಗಳು ಎಂದು ಉಪೇಂದ್ರ ಹೇಳಿದ್ದಾರೆ. 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಉತ್ತಮ ಪ್ರಜಾಕೀಯ ಪಕ್ಷದಿಂದ ಸ್ಪರ್ಧಿಸುವ ಎಲ್ಲ ಅಭ್ಯರ್ಥಿಗಳಿಗೆ ಆಟೋ ರಿಕ್ಷಾವನ್ನು ಸಾಮಾನ್ಯ ಚಿಹ್ನೆ ಎಂದು ಚುನಾವಣಾ ಆಯೋಗ ನಿಗದಿಪಡಿಸಿದೆ.