



ಡೈಲಿ ವಾರ್ತೆ:28 ಫೆಬ್ರವರಿ 2023


ದಕ್ಷಿಣ ಕನ್ನಡ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಉದ್ಯಮಿ ಹೃದಯಾಘಾತದಿಂದ ಸಾವು
ಮಂಗಳೂರು: ಜೆಪ್ಪು ಬಂಟರ ಸಂಘದ ವತಿಯಿಂದ ಏರ್ಪಡಿಸಿದ್ದ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಫೆ.26ರ ಸಂಜೆ ನಡೆದಿದೆ.
ಕಾರ್ಯಕಾರಿ ಸಮಿತಿ ಸದಸ್ಯ ಕುಶಲನಾಥ ಶೆಟ್ಟಿ(50) ಮೃತಪಟ್ಟವರು. ಅವರು ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಸ್ಪರ್ಧೆಯಲ್ಲಿ ಅವರಿದ್ದ ತಂಡ ಗೆಲುವು ಸಾಧಿಸಿತ್ತು, ಸ್ಪರ್ಧೆಯ ಬಳಿಕ ಕುಳಿತಿದ್ದ ಅವರಿಗೆ ಎದೆನೋವು ಕಾಣಿಸಿಕೊಂಡಿತು, ಹಾಗೂ ವಾಂತಿ ಮಾಡಿಕೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.