ಡೈಲಿ ವಾರ್ತೆ:05 ಮಾರ್ಚ್ 2023

ಯುವಕನೊರ್ವ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ವೇಳೆ ಮೊಬೈಲ್ ಬ್ಲಾಸ್ಟ್:ಯುವಕ ಪ್ರಾಣಾಪಾಯದಿಂದ ಪಾರು

ಬಳ್ಳಾರಿ: ಮಾತನಾಡುತ್ತಿದ್ದ ವೇಳೆ ಮೊಬೈಲ್ ಬ್ಲಾಸ್ಟ್ ಆಗಿ ಯುವಕನೋರ್ವ ಪ್ರಾಣಾಪಾಯದಿಂದ ಪಾರಾದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕು, ಗೆದ್ಲಗಟ್ಟೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಯುವಕ ಪವನ್ ಮನೆಯಲ್ಲಿ ಆಪ್ತರಿಗೆ ಕರೆ ಮಾಡಿ ಮಾತನಾಡುತ್ತಿದ್ದರು. ಈ ವೇಳೆ ಏಕಾಏಕಿ ಮೊಬೈಲ್ ಬ್ಲಾಸ್ಟ್ ಆಗಿದೆ.
ಸ್ಫೋಟಗೊಂಡ ಪರಿಣಾಮ ಪವನ್ ಅವರ ಮುಖ ಮತ್ತು ಕಣ್ಣಿಗೆ ಗಂಭೀರವಾದ ಗಾಯಗಳಾಗಿವೆ.