ಡೈಲಿ ವಾರ್ತೆ:05 ಮಾರ್ಚ್ 2023

ಉದ್ಯಮಿ ನಿವಾಸದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಕೋಟ್ಯಾಂತರ ರೂಪಾಯಿ ನಗದು ಪತ್ತೆ.!

ಹುಬ್ಬಳ್ಳಿ : ಹುಬ್ಬಳ್ಳಿಯ ಆಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಬರೋಬ್ಬರಿ 3 ಕೋಟಿ ರೂಪಾಯಿ ಕಪ್ಪು ಹಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಉದ್ಯಮಿ ರಮೇಶ್ ಬೊಣಗೇರಿ ಅವರ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ‌ ನಡೆಸಿದ್ದಾರೆ.

ಅಕ್ರಮವಾಗಿ ಕಪ್ಪು ಹಣ ಸಂಗ್ರಹಿಸಿಟ್ಟಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿದೆ.ಸಿಸಿಬಿ ಡಿವೈಎಸ್ಪಿ ನಾರಾಯಣ ಬರಮನಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದು, ಮನೆಯನ್ನು ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.