ಡೈಲಿ ವಾರ್ತೆ:07 ಮಾರ್ಚ್ 2023

ಎಸಿ ಸ್ಫೋಟಗೊಂಡು ತಾಯಿ, ಇಬ್ಬರು ಮಕ್ಕಳು ಮೃತ್ಯು

ರಾಯಚೂರು: ಶಾರ್ಟ್ ಸರ್ಕ್ಯೂಟ್ನಿಂದ ಎಸಿ ಸ್ಫೋಟಗೊಂಡ ಹಿನ್ನೆಲೆ ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟ ಘಟನೆ ರಾಯಚೂರು ತಾಲೂಕಿನ ಶಕ್ತಿನಗರದಲ್ಲಿ ನಡೆದಿದೆ.

ತಾಯಿ ರಂಜಿತಾ(33), ಮಕ್ಕಳಾದ ಮೃದಲ್(13), ತಾರುಣ್ಯ(5) ಮೃತರಾಗಿದ್ದು, ಮೂಲತಃ ಮಂಡ್ಯ ನಿವಾಸಿಗಳು ಎಂದು ಗುರುತಿಸಲಾಗಿದೆ.
ಮನೆಯಲ್ಲಿ ಅಳವಡಿಸಿದ್ದ ಎಸಿ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದ್ರೆ ಘಟನೆಗೆ ಇನ್ನೂ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ.
ಮೃತ ರಂಜಿತಾ ಪತಿ ಸಿದ್ದಲಿಂಗಯ್ಯ ಸ್ವಾಮಿ ಆರ್‌ಟಿಪಿಎಸ್‌ನಲ್ಲಿ ಎಇಇ ಆಗಿ ಕೆಲಸ ಮಾಡುತ್ತಿದ್ದಾರೆ. ಇವರು ಕೆಲಸಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ಅವಘಡ ನಡೆದಿದೆ.

ಸ್ಥಳಕ್ಕೆ ಶಕ್ತಿನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.