


ಡೈಲಿ ವಾರ್ತೆ:11 ಮಾರ್ಚ್ 2023


ಮಣಿಪಾಲ ಠಾಣಾ ಹೆಡ್ ಕಾನ್ಸ್ಟೇಬಲ್ ಶಂಕರ್ ಮೃತ್ಯು
ಮಣಿಪಾಲ: ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಕೋಟ ಹಂಗಾರಕಟ್ಟೆಯ ನಿವಾಸಿ ಶಂಕರ (50) ಅನಾರೋಗ್ಯದಿಂದ ಇಂದು ಶನಿವಾರ ಬೆಳಗ್ಗಿನ ಜಾವ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಇದ್ದ ಶಂಕರ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಅವರ ದೇಹದ ಸ್ಥಿತಿ ತೀವ್ರ ಹದಗೆಟ್ಟಿದ್ದು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಬೆಳಿಗ್ಗೆ ನಿಧನ ಹೊಂದಿದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಮೃತರು ಅವಿವಾಹಿತರಾಗಿದ್ದು, ಸಹೋದರಿಯರನ್ನು ಆಗಲಿದ್ದಾರೆ. ಅವರು ಉಡುಪಿ, ಬ್ರಹ್ಮಾವರ, ಕುಂದಾಪುರ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.