ಡೈಲಿ ವಾರ್ತೆ:12 ಮಾರ್ಚ್ 2023

ಮಹಿಳಾ ಗ್ರಾಮ ಲೆಕ್ಕಾಧಿಕಾರಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ.!

ಮೈಸೂರು:ಮಹಿಳಾ ಗ್ರಾಮ ಲೆಕ್ಕಾಧಿಕಾರಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಬಿಳಿಕೆರೆ ಹೋಬಳಿಯ ಶ್ಯಾನುಬೋಗನಹಳ್ಳಿ ವಲಯದ ಗ್ರಾಮ ಲೆಕ್ಕಾಧಿಕಾರಿ ಕೃಷ್ಣಾಬಾಯಿ ತುಕಾರಾಂ ಪಡ್ಕೆ (25) ಮೃತ ದುರ್ದೈವಿ.

ಕೃಷ್ಣಾಬಾಯಿ ತುಕಾರಾಂ ಪಡ್ಕ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಎಸ್‌ಗಳ್ಳಿ ಗ್ರಾಮದವರು. ಕೃಷ್ಣಾಬಾಯಿ ಅವರಿಗೆ 1 ತಿಂಗಳ ಹಿಂದೆಯಷ್ಠೇ ವಿವಾಹವಾಗಿತ್ತು. ಕೃಷ್ಣಾಬಾಯಿ, 4 ದಿನಗಳ ಹಿಂದೆಯಷ್ಟೆ ಕರ್ತವ್ಯಕ್ಕೆ ಹಾಜರಾಗಿದ್ದು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಸಾವಿಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.