



ಡೈಲಿ ವಾರ್ತೆ:12 ಮಾರ್ಚ್ 2023


ಕಾಪು : ಬೈಕ್ ಗೆ ಅಂಬುಲೆನ್ಸ್ ಢಿಕ್ಕಿ, ಬೈಕ್ ಸವಾರ ಮೃತ್ಯು.!
ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಕಾಪುವಿನಲ್ಲಿ ಬೈಕ್‌ಗೆ ಅಂಬುಲೆನ್ಸ್ ಢಿಕ್ಕಿ ಹೊಡೆದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ನಡೆದಿದೆ.
ಉಚ್ಚಿಲ ನಿವಾಸಿ ರಿತೇಶ್ ದೇವಾಡಿಗ ಮೃತ ದುರ್ದೈವಿ. ಉಚ್ಚಿಲದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಬೈಕ್‌ಗೆ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಅಂಬುಲೆನ್ಸ್ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.
ರಾ.ಹೆ.66ರ ಕಾಪುವಿನಲ್ಲಿ ನಡೆಯುತ್ತಿರುವ ರಸ್ತೆ ಮರು ಡಾಮರೀಕರಣ ಕಾಮಗಾರಿಯ ಕಾರಣದಿಂದಾಗಿ ಮಂಗಳೂರು-ಉಡುಪಿ ರಸ್ತೆಯಲ್ಲಿ ಏಕಮುಖ ಸಂಚಾರ ವ್ಯವಸ್ಥೆಯಿದ್ದು, ಅಂಬುಲೆನ್ಸ್ ಚಾಲಕ ವಿರುದ್ಧ ದಿಕ್ಕಿನಲ್ಲಿ ಅಂಬುಲೆನ್ಸ್‌ನ್ನು ಚಲಾಯಿಸಿಕೊಂಡು ಬಂದು ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು ಅಂಬುಲೆನ್ಸ್ ಮತ್ತು ಚಾಲಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.