ಡೈಲಿ ವಾರ್ತೆ:15 ಮಾರ್ಚ್ 2023

ಉಡುಪಿ: ತಡರಾತ್ರಿ ಗುಜರಿ ಅಂಗಡಿಯಲ್ಲಿ ಬೆಂಕಿ, ಲಕ್ಷಾಂತರ ಮೌಲ್ಯದ ವಸ್ತುಗಳು ಅಗ್ನಿಗಾಹುತಿ!

ಉಡುಪಿ : ಉಡುಪಿ ನಗರದ ಕಿನ್ನಿಮೂಲ್ಕಿ ಸ್ವಾಗತ ಗೋಪುರ ಸಮೀಪದ ಗುಜರಿ ಅಂಗಡಿಯೊಂದರಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಸುಮಾರು 12 ಗಂಟೆ ಹೊತ್ತಿಗೆ ಬೆಂಕಿ ಹೊತ್ತಿಕೊಂಡಿದ್ದು ತಕ್ಷಣ ಉಡುಪಿ ಮತ್ತು ಮಲ್ಪೆಯ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು.

ಪ್ಲಾಸ್ಟಿಕ್ ಜೊತೆಗೆ ಗುಜರಿ ಸಾಮಾನುಗಳು, ಕಚ್ಚಾ ತೈಲಗಳು ಕ್ಷಣಾರ್ಧದಲ್ಲಿ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿವೆ. ಸಮೀಪದಲ್ಲೇ ಹಲವು ಮನೆಗಳಿರುವ ಈ ಪ್ರದೇಶದಲ್ಲಿ ವಾಹನಗಳನ್ನೂ ನಿಲ್ಲಿಸಲಾಗಿತ್ತು. ಅಗ್ನಿಶಾಮಕ ಸಿಬ್ಬಂದಿಯ ಸಕಾಲದ ಕಾರ್ಯಾಚರಣೆಯಿಂದಾಗಿ ಭಾರಿ ಅವಘಡ ತಪ್ಪಿದೆ. ತಡರಾತ್ರಿ ಹೊತ್ತಿಕೊಂಡ ಬೆಂಕಿ ಮುಂಜಾನೆ ಹೊತ್ತಿಗೆ ನಿಯಂತ್ರಣಕ್ಕೆ ಬಂತು ಎಂದು ಸ್ಥಳೀಯರು ತಿಳಿಸಿದ್ದಾರೆ.