ಡೈಲಿ ವಾರ್ತೆ:15 ಮಾರ್ಚ್ 2023
ಬಿಜೆಪಿ ಎಂಎಲ್‌ಸಿ ಆರ್.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ: 8 ಕೋಟಿ ರೂ. ಮೌಲ್ಯದ ಸೀರೆ, ತಟ್ಟೆ-ಲೋಟಾ, ಬ್ಯಾಗ್ ಪತ್ತೆ!
ಹಾವೇರಿ : ಬಿಜೆಪಿ ವಿಧಾನಪರಿಷತ್ ಸದಸ್ಯ ಆರ್. ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಬೀರಲಿಂಗೇಶ್ವರ ನಗರದಲ್ಲಿರುವ ಶಂಕರ್ ಮನೆ ಮೇಲೆ ನಿನ್ನೆ ತಡರಾತ್ರಿ ದಾಳಿಯಾಗಿದ್ದು, ಈ ವೇಳೆ ಆರ್. ಶಂಕರ್ ಗೃಹಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕರಿಗೆ ಹಂಚಲು ತಂದಿದ್ದ ಹಲವು ವಸ್ತುಗಳು ಪತ್ತೆಯಾಗಿವೆ. ಆರ್.ಶಂಕರ್ ಭಾವಚಿತ್ರ ಇರುವ ಸೀರೆ ಬಾಕ್ಸ್, ತಟ್ಟೆ, ಲೋಟಾ ಹಾಗೂ ಎಲ್.ಕೆ.ಜಿಯಿಂದ ಪದವಿ ಕಾಲೇಜು ಮಕ್ಕಳ ತನಕ ಹಂಚಲು ತಂದಿದ್ದ ಸ್ಕೂಲ್ ಬ್ಯಾಗ್ ಸಿಕ್ಕಿದೆ. ಸುಮಾರು 8 ಕೋಟಿ ರೂಪಾಯಿ ವೆಚ್ಚದ ವಸ್ತುಗಳು ಪತ್ತೆಯಾಗಿವೆ ಎಂದು ಅಂದಾಜಿಸಲಾಗಿದ್ದು, ಈ ಎಲ್ಲ ವಸ್ತುಗಳ GST ಬಿಲ್ ಕೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಆ ಶಂಕರ್, ಬಿಲ್ ಕೊಡಲು ಅವಕಾಶ ಕೇಳಿದ್ದಾರೆ. ಒಂದು ವೇಳೆ ಸರಿಯಾದ ಜಿಎಸ್‌ಟಿ ಬಿಲ್ ಇಲ್ಲದಿದ್ರೆ ದಂಡ ವಿಧಿಸುವ
ಸಾಧ್ಯತೆ ಇದೆ.