ಡೈಲಿ ವಾರ್ತೆ:18 ಮಾರ್ಚ್ 2023

ಹುಣಸೂರು: ಬೈಕ್ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ:ಬೈಕ್ ಸವಾರ ಸ್ಥಳದಲ್ಲೇ ಸಾವು

ಹುಣಸೂರು: ಕ್ಯಾಂಟರ್- ಬೈಕ್ ಗೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು-ಬಂಟ್ವಾಳ ಹೆದ್ದಾರಿಯ ಯಶೋಧರ ಪುರದ ಬಳಿ ನಡೆದಿದೆ.ತಾಲೂಕಿನ ಕೊತ್ತೆಗಾಲ ನಿವಾಸಿ, ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆ ಡಿ.ಗ್ರೂಪ್ ನೌಕರ ಮಾದೇಶ್ ಗೌಡ(57) ಮೃತ ಸವಾರ. ಇವರಿಗೆ ಪತ್ನಿ, ಇಬ್ಬರು ಗಂಡು ಮಕ್ಕಳಿದ್ದಾರೆ.
ಗ್ರಾಮದಿಂದ ಹುಣಸೂರು ಕಡೆಗೆ ಬರುತ್ತಿದ್ದ ಮಾದೇಶ್ ಅವರ ಬೈಕ್ ಗೆ ಹುಣಸೂರು ಕಡೆಯಿಂದ ಪಿರಿಯಾಪಟ್ಟಣ ಕಡೆಗೆ ಹೋಗುತ್ತಿದ್ದ ಕ್ಯಾಂಟರ್ ಗೂಡ್ಸ್ ವಾಹನ ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್ ಗೆ ಢಿಕ್ಕಿ ಹೊಡೆದಿದೆ. ಈ ಪರಿಣಾಮ ಸವಾರ ಮಾದೇಶ್ ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.