ಡೈಲಿ ವಾರ್ತೆ:18 ಮಾರ್ಚ್ 2023

ಕೋಲಾರ ಕ್ಷೇತ್ರದಿಂದ ಸ್ಪರ್ಧಿಸದಂತೆ ಸಿದ್ಧರಾಮಯ್ಯಗೆ ರಾಹುಲ್ ಗಾಂಧಿ ಸಲಹೆ.!

ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ. ಆದರೆ ಅವರಿಗೆ ರಾಹುಲ್ ಗಾಂಧಿ ಮಹತ್ವದ ಸಲಹೆಯೊಂದನ್ನು ನೀಡಿರುವುದು ತಿಳಿದು ಬಂದಿದೆ.

ಕೋಲಾರ ಕ್ಷೇತ್ರದಿಂದ ಸ್ಪರ್ಧಿಸದಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಕೋಲಾರದಿಂದ ಸ್ಪರ್ಧೆ ಮಾಡಬೇಡಿ, ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಹೈಕಮಾಂಡ್ ಹೇಳಿದ ಕ್ಷೇತ್ರದಿಂದ ನಾನು ಸ್ಪರ್ಧಿಸುತ್ತೇನೆ. ನಂಜನಗೂಡು ಕ್ಷೇತ್ರದಿಂದ ಧ್ರುವನಾರಾಯಣ ಪುತ್ರ ಸ್ಪರ್ಧಿಸುತ್ತಾರೆ. ನಂಜನಗೂಡು ಕ್ಷೇತ್ರದಿಂದ ಮಹದೇವಪ್ಪ ಸ್ಪರ್ಧಿಸುವುದಿಲ್ಲವೆಂದು ಹೇಳಿದ್ದಾರೆ ಎಂದರು.
ಇನ್ನೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ನ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆದಿದ್ದು, ಸುಮಾರು 3 ಗಂಟೆಗಳ ಕಾಲ ನಡೆದ ಸಭೆಯಲ್ಲಿ 125 ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ.