ಡೈಲಿ ವಾರ್ತೆ:18 ಮಾರ್ಚ್ 2023

ವಿಟ್ಲ: ದ್ವಿಚಕ್ರ ವಾಹನಕ್ಕೆ ಬೋರ್‌ವೆಲ್ ಲಾರಿ ಢಿಕ್ಕಿ-ಸವಾರ ಸ್ಥಳದಲ್ಲೇ ಮೃತ್ಯು

ವಿಟ್ಲ : ಬೋರ್‌ವೆಲ್ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ವಿಟ್ಲದ ಕಾಶಿಮಠದಲ್ಲಿ ಮಾರ್ಚ್ 18 ರಂದು ಶನಿವಾರ ಮಧ್ಯಾಹ್ನ ನಡೆದಿದೆ.

ಉಕ್ಕುಡ ಆಲಂಗಾರು ನಿವಾಸಿ ರಂಜಿತ್ (20) ಮೃತ ದುರ್ದೈವಿ.
ವಿಟ್ಲ ಕಡೆಯಿಂದ ಉಕ್ಕುಡ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ವಿರುದ್ಧ ದಿಕ್ಕಿನಿಂದ ಬಂದ ಬೋರ್‌ವೆಲ್ ಲಾರಿ ಢಿಕ್ಕಿ ಹೊಡೆದಿದೆ.

ಢಿಕ್ಕಿಯ ಬಳಿಕ ಲಾರಿಯು ಬೈಕ್ ಸವಾರರನ್ನು ಕೆಲ ಮೀಟರುಗಳ ದೂರ ಎಳೆದೊಯ್ಯದಿದ್ದು, ಅಪಘಾತದ ತೀವ್ರತೆಗೆ ಬೈಕ್ ಸವಾರನ ತಲೆ ಛಿದ್ರವಾಗಿದೆ. ಸಹಸವಾರ ಅಪಾಯದಿಂದ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.