ಡೈಲಿ ವಾರ್ತೆ:19 ಮಾರ್ಚ್ 2023

ವಿವಾಹ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು:ವಿವಾಹ ನಿಶ್ಚಯವಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪುಲ್ಲೂರು ಪೆರಿಯದಲ್ಲಿ ನಡೆದಿದೆ.

ಚಾಲಿಂಗಾಲ್ ನ ಸಂಶುದ್ದೀನ್ ರವರ ಪುತ್ರಿ ಫಾತಿಮಾ (18)ಆತ್ಮಹತ್ಯೆ ಮಾಡಿಕೊಂಡವರು. ಇವರು ನರ್ಸಿಂಗ್ ಕಲಿಯುತ್ತಿದ್ದರು ಎನ್ನಲಾಗಿದೆ.
ಮನೆಯವರು ಹೊರಗಡೆ ತೆರಳಿದ್ದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎ‌ನ್ನಲಾಗಿದೆ. ಮನೆಯವರು ಮರಳಿ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ.
ಈ ಕುರಿತು ಅಂಬಲತ್ತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.