ಡೈಲಿ ವಾರ್ತೆ:19 ಮಾರ್ಚ್ 2023

ಮಳೆಯಿಂದ ವಿದ್ಯುತ್ ತಗುಲಿ ತಾಯಿ, ಇಬ್ಬರು ಮಕ್ಕಳು ಮೃತ್ಯು

ಚಿಂಚೋಳಿ (ಕಲಬುರಗಿ ಜಿಲ್ಲೆ): ಪಟ್ಟಣದ ಧನಗರ ಗಲ್ಲಿಯಲ್ಲಿ ವಿದ್ಯುತ್ ತಗುಲಿ ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ನಡೆದಿದೆ.ಘಟನೆಯಲ್ಲಿ ಝರಣಮ್ಮ ಅಂಬಣ್ಣ ಬಸಗೊಂಡ (45), ಮಹೇಶ ಅಂಬಣ್ಣ ಬಸಗೊಂಡ (20), ಸುರೇಶ ಅಂಬಣ್ಣ ಬಸಗೊಂಡ (18) ಮೃತ ದುರ್ದೈವಿಗಳಾಗಿದ್ದಾರೆ.

ಬೆಳಗಿನ ಜಾವ 1ಗಂಟೆ ಸುಮಾರಿಗೆ ಗುಡುಗು ಮಿಂಚು ಸಹಿತ ಜೋರು ಮಳೆ ಸುರಿಯುತ್ತಿದ್ದಾಗ ವಿದ್ಯುತ್ ತಂತಿ ಕಡಿದು ನೆಲಕ್ಕೆ ಬಿದ್ದಿದೆ.

ಮನೆಯ ಹೊರಗಡೆ ಸಂಗ್ರಹಿಸಿದ್ದ (ಹೊಟ್ಟು) ಜಾನುವಾರುಗಳ ಮೇವು ಮಳೆಯಲ್ಲಿ ನೆನೆಯುತ್ತದೆ ಎಂದು ತಾಡಪತ್ರಿಯಿಂದ ಮುಚ್ಚಲು ಹೋದಾಗ ವಿದ್ಯುತ ತಗುಲಿದೆ. ಘಟನೆಯಲ್ಲಿ ಅಂಬಣ್ಣನಿಗೆ ಗಾಯಗಳಾಗಿದ್ದು, ಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಇಲ್ಲಿನ ಚಂದಾಪುರದ ತಾಲ್ಲೂಕು ಆಸ್ಪತ್ರೆಗೆ ತರಲಾಗಿದೆ.