ಡೈಲಿ ವಾರ್ತೆ:19 ಮಾರ್ಚ್ 2023

ಇಬ್ಬರು ಅನಾಥ ಮಕ್ಕಳನ್ನು ದತ್ತು ತೆಗೆದುಕೊಂಡ ಜನಾರ್ದನ ರೆಡ್ಡಿ

ಕೊಪ್ಪಳ; ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ಧನ ರೆಡ್ಡಿ ಕೊಪ್ಪಳದಲ್ಲಿ ಇಬ್ಬರು ಬಡ ಮಕ್ಕಳನ್ನು ದತ್ತು ತೆಗೆದುಕೊಂಡಿದ್ದಾರೆ.

ತಂದೆ-ತಾಯಿ ಇಲ್ಲದೆ ಅನಾಥವಾಗಿರುವ ಕೊಪ್ಪಳ ಜಿಲ್ಲೆಯ ಗಂಗಾವತಿಯ ವೀರುಪಾಪುರ ತಾಂಡದ ಇಬ್ಬರು ಮಕ್ಕಳನ್ನು ದತ್ತು ಪಡೆದಿದ್ದಾರೆ.

ಸ್ವರೂಪ್, ವೇಣು ಎಂಬ ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ಧನ ರೆಡ್ಡಿ ಮಕ್ಕಳ ಶಿಕ್ಷಣ ಸೇರಿದಂತೆ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡಿದ್ದಾರೆ.

ಮಕ್ಕಳನ್ನು ದತ್ತು ತೆಗೆದುಕೊಂಡ ಬಗ್ಗೆ ಜನಾರ್ದನ ರೆಡ್ಡಿ ಬಹಿರಂಗ ಸಭೆಯಲ್ಲಿ ಘೋಷಣೆ ಮಾಡಿದ್ದಾರೆ. ಇದೇ ವೇಳೆ ಅವರು ಐದು ಸಾವಿರ ಕೋಟಿ ವೆಚ್ಚದಲ್ಲಿ ಅಂಜನಾದ್ರಿಯನ್ನು ಅಭಿವೃದ್ಧಿ ಮಾಡುತ್ತೇನೆ ಎಂದು ಗಂಗಾವತಿಯ ಪ್ರಚಾರದಲ್ಲಿ ಜನಾರ್ಧನ ರೆಡ್ಡಿ ಹೇಳಿಕೆ ನೀಡಿದ್ದಾರೆ.