ಡೈಲಿ ವಾರ್ತೆ:21 ಮಾರ್ಚ್ 2023

ಧರ್ಮದ ಬಗ್ಗೆ ವಿವಾದಾತ್ಮಕ ಟ್ವೀಟ್: ನಟ, ಸಾಮಾಜಿಕ ಹೋರಾಟಗಾರ ಚೇತನ್ ಬಂಧನ

ಬೆಂಗಳೂರು: ಧರ್ಮದ ಬಗ್ಗೆ ವಿವಾದಾತ್ಮಕ ಟ್ವೀಟ್ ಮಾಡಿರುವ ನಟ, ಸಾಮಾಜಿಕ ಹೋರಾಟಗಾರ ಚೇತನ್ ಬಂಧನವಾಗಿದೆ.

ಶಿವಕುಮಾರ್ ಎನ್ನುವವರು ನೀಡಿದ ದೂರಿನ ಆಧಾರದಲ್ಲಿ ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ.
ಉರಿಗೌಡ- ನಂಜೇಗೌಡ ವಿವಾದದ ನಡುವೆ ಚೇತನ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ; ರಾಮನು ರಾವಣನನ್ನು ಸೋಲಿಸಿ ಅಯೋಧ್ಯಗೆ ಹಿಂದಿರುಗಿದಾ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಎನ್ನುವುದು ಇದು ಒಂದು ಸುಳ್ಳು. 1992ರಲ್ಲಿ ಬಾಬರಿ ಮಸೀದಿ ರಾಮನ ಜನ್ಮ ಭೂಮಿ – ಇದು ಒಂದು ಸುಳ್ಳು. ಈಗ 2023ರಲ್ಲಿ ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು ಎನ್ನುವುದು ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು, ಸತ್ಯವೇ ಸಮಾನತೆ’ ಎಂದು ಚೇತನ್ ಪೋಸ್ಟ್ ನಲ್ಲಿ ಬರೆದಿದ್ದಾರೆ.

ಶಿವಕುಮಾರ್ ಅವರು ಚೇತನ್ ವಿರುದ್ಧ ಶೇಶಾದ್ರಿಪುರ ಸ್ಟೇಶನ್ ನಲ್ಲಿ ದೂರು ನೀಡಿದ್ದರು. ಇದನ್ನು ಆಧರಿಸಿ ಪೊಲೀಸರು ನಟನನ್ನು ಬಂಧಿಸಿದ್ದು, ಕೋರ್ಟ್ ಗೆ ಹಾಜರುಪಡಿಸಿದ್ದಾರೆ.