ಡೈಲಿ ವಾರ್ತೆ:21 ಮಾರ್ಚ್ 2023
ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಆಟೊ-ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು
ಮಂಗಳೂರು: ಕಾರೊಂದು ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಟೊ ಮತ್ತು ಕಾರಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿ ಕಾರು ರಸ್ತೆ ಪಕ್ಕ ಪಲ್ಟಿಯಾದ ಘಟನೆ ಮಂಗಳೂರಿನ ಕೋರ್ಟ್ ರಸ್ತೆಯಲ್ಲಿ ನಡೆದಿದೆ.
ಕಾರಿನಲ್ಲಿದ್ದ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗವೆ. ಆದರೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ತಿಳಿದು ಬಂದಿದೆ.
ಕಾರನ್ನು ಇಳಿಜಾರಿನಲ್ಲಿ ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಚಾಲಕನ ಚಪ್ಪಲ್ ಎಕ್ಸೆಲೇಟರ್ ಪೆಡಲ್ ನಡುವೆ ಸಿಕ್ಕಿಹಾಕಿಕೊಂಡ ಪರಿಣಾಮ ಕಾರಿನ ವೇಗ ಹೆಚ್ಚಾಗಿ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ ಎನ್ನಲಾಗಿದೆ.
ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗಿದ್ದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.