ಡೈಲಿ ವಾರ್ತೆ:22 ಮಾರ್ಚ್ 2023

ಮಾ. 23 ರಂದು ಬ್ರಹ್ಮಾವರ ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಲೋಕಾರ್ಪಣೆ

ಬ್ರಹ್ಮಾವರ: ಉಡುಪಿ ಜಿಲ್ಲೆಯ ಕಂದಾಯ ಇಲಾಖೆ ಹಾಗೂ ಜಿಲ್ಲಾಡಳಿತದ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಾವರ ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನಾ ಸಮಾರಂಭವು ದಿನಾಂಕ 23 ರಂದು ಗುರುವಾರ ಅಪರಾಹ್ನ ಗಂಟೆ 2:30 ಗೆ ನಡೆಯಲಿದೆ. ಕಂದಾಯ ಸಚಿವ ಆರ್ ಅಶೋಕ್ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ರಘುಪತಿ ಭಟ್ ವಹಿಸಲಿದ್ದಾರೆ.
ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್, ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆ ಸಚಿವ ವಿ ಸೋಮಣ್ಣ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಸಂಸದ ಬಿ. ವೈ ರಾಘವೇಂದ್ರ, ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಲಾಲಾಜಿ ಆರ್ ಮೆಂಡನ್ ಮತ್ತು ಬಿ.ಎಂ ಸುಕುಮಾರ್ ಶೆಟ್ಟಿ, ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ, ಎಸ್.ಎಲ್. ಭೋಜೆಗೌಡ, ಡಾ. ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ಚಣಿಲ, ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್, ಕಂದಾಯ ಇಲಾಖೆಯ ಕಾರ್ಯದರ್ಶಿ ಎನ್. ಜಯರಾಮ್, ವಸತಿ ಇಲಾಖೆಯ ಕಾರ್ಯದರ್ಶಿ ಡಾ. ರವಿಶಂಕರ್ ಜೆ, ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ. ಜಿ.ಸಿ ಪ್ರಕಾಶ್, ಕರ್ನಾಟಕ ಗೃಹ ಮಂಡಳಿ ಆಯುಕ್ತೆ ಕವಿತಾ ಎಸ್ ಮನ್ನಿಕೇರಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಎಮ್ ಹಾಕೆ, ಕರ್ನಾಟಕ ಗೃಹ ಮಂಡಳಿ ಮುಖ್ಯ ಅಭಿಯಂತರ ಶರಣಪ್ಪ ಸುಲಗಂಟೆ, ಕರ್ನಾಟಕ ಗೃಹ ಮಂಡಳಿ ಕಾರ್ಯದರ್ಶಿ ಸಿದ್ದಲಿಂಗಪ್ಪ ಎನ್ ಆರ್ ಹಾಗೂ ಮತ್ತಿತರರು ಭಾಗವಹಿಸಲಿರುವರು ಎಂದು ಬುಧವಾರ ಬ್ರಹ್ಮಾವರ ತಹಸೀಲ್ದಾರ್ ರಾಜಶೇಖರ ಮೂರ್ತಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಎಲ್ಲಾ ನಾಗರಿಕರಲ್ಲಿ ಮನವಿ ಮಾಡಿದ ಅವರು ಈ ಐತಿಹಾಸಿಕವಾದ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ ಸಾಕ್ಷಿಗಳಾಗಬೇಕು. ಅದರ ಸದ್ಬಳಕೆ ಬಗ್ಗೆ ಮತ್ತು ವ್ಯವಸ್ಥಿತವಾಗಿ ಅದನ್ನು ನಾಗರಿಕರಿಗೆ ಎಲ್ಲಾ ತಲುಪುವಂತೆ ಸಹಕರಿಸಬೇಕೆಂದು ಮನವಿ ಮಾಡಿದರು.
ಈ ನೂತನ ಕಟ್ಟಡದಲ್ಲಿ ಕಂದಾಯ ಇಲಾಖೆ, ಆಹಾರ ಇಲಾಖೆ, ಚುನಾವಣೆ ಆಯೋಗದ ಕಚೇರಿ, ಉಪ ನೋಂದಾವಣೆ ಕಚೇರಿ, ಖಜಾನೆ ಇಲಾಖೆ ಕಚೇರಿಗಳು ಪ್ರಾರಂಭಗೊಳ್ಳಲಿದೆ ಎಂದರು.
ಇನ್ನು ಹಳೆ ಕಟ್ಟಡದ ಕಾರ್ಯ ಚಟುವಟಿಕೆಗಳು ಹೊಸ ಕಟ್ಟಡಕ್ಕೆ ವರ್ಗಾವಣೆಗೊಳ್ಳಲಿದೆ.
ಅಲ್ಲದೆ ಸಬ್ ರಿಜಿಸ್ಟರ್ ಕಚೇರಿ ಕೂಡ ಹೊಸ ಕಟ್ಟಡದಲ್ಲಿ ಕಾರ್ಯ ಆರಂಭ ಮಾಡಲಿದೆ ಎಂದು ಹೇಳಿದರು.
ಹಳೆ ಕಟ್ಟಡದಲ್ಲಿ 32 ಸೆಂಟ್ಸ್ ಜಾಗ ಹಾಗೂ ಸಬ್ ರಿಜಿಸ್ಟರ್ ಕಚೇರಿಯಲ್ಲಿ 80 ಸೆಂಟ್ಸ್ ಖಾತೆ ಇದೆ. ಈ ಎರಡು ಕಟ್ಟಡದಲ್ಲಿ BEO ಕಚೇರಿ ಹಾಗೂ ತಾಲೂಕು ಪಂಚಾಯತ್ ಕಚೇರಿಗೆ ಬಿಟ್ಟು ಕೊಟ್ಟು ತಾಲೂಕು ಅಭಿವೃದ್ಧಿಗೆ ಸಹಕಾರಕೊಡಬೇಕೆಂದು ತೀರ್ಮಾನಿಸಿದ್ದೇವೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಉಪತಹಶೀಲ್ದಾರ್ ರಾಘವೇಂದ್ರ, ಕಂದಾಯ ಅಧಿಕಾರಿ ಲಕ್ಷ್ಮೀನಾರಾಯಣ ಭಟ್ ಇದ್ದರು.