ಡೈಲಿ ವಾರ್ತೆ:23 ಮಾರ್ಚ್ 2023
ನಾಳೆಯಿಂದ ರಾಜ್ಯಾದ್ಯಂತ ಸಾರಿಗೆ ಸೇವೆ ಬಂದ್: ಮುಷ್ಕರಕ್ಕೆ ಕರೆ
ಬೆಂಗಳೂರು : ಸರ್ಕಾರಿ ನೌಕರರ ವೇತನಕ್ಕೆ ಸರಿ ಸಮಾನವಾಗಿ ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಸಾರಿಗೆ ನೌಕರರು ನಾಳೆಯಿಂದ ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ.
ಈ ಹಿನ್ನೆಲೆಯಲ್ಲಿ ನಾಳೆಯಿಂದ ರಾಜ್ಯಾದ್ಯಂತ ಸಾರಿಗೆ ಸೇವೆ ಬಂದ್ ಆಗಲಿವೆ. ಈ ಹಿಂದೆ ಮಾರ್ಚ್ 21ರಂದು ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದರು. ಈ ವೇಳೆ 15% ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಮುಷ್ಕರ ಹಿಂಪಡೆದಿದ್ದರು.
ಆದರೆ, ಸಮಾನ ಮನಸ್ಕರರ ವೇದಿಕೆ ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ಕೊಟಿದ್ದು, ಸರ್ಕಾರಿ ನೌಕರರಿಗೆ ಸಮಾನವಾಗಿ ವೇತನ ಹೆಚ್ಚಳ ಮಾಡಬೇಕು ಎಂದು ಬೇಡಿಕೆ ಇಟ್ಟಿದೆ.