ಡೈಲಿ ವಾರ್ತೆ:24 ಮಾರ್ಚ್ 2023
ಎಸ್‌ಸಿ, ಎಸ್‌ಟಿ ಮೀಸಲಾತಿ ವಿಳಂಬ ಖಂಡಿಸಿ ರಾಜಭವನ ಚಲೋ – ಸಿದ್ದರಾಮಯ್ಯ, ಡಿಕೆಶಿ ವಶಕ್ಕೆ
ಬೆಂಗಳೂರು: ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ವಿಳಂಬ ಖಂಡಿಸಿ ರಾಜಭವನ ಚಲೋ ನಡೆಸಲು ಮುಂದಾದ ಸಿದ್ದರಾಮಯ್ಯ, ಡಿಕೆಶಿ ಸೇರಿ ಕೈ ನಾಯಕರನ್ನು ಪೊಲೀಸರು ತಡೆದು ವಶಕ್ಕೆ ಪಡೆದುಕೊಂಡರು.
ಕೆಪಿಸಿಸಿ ಕಚೇರಿಯಿಂದ ರಾಜಭವನಕ್ಕೆ ಕಾಂಗ್ರೆಸ್ ನಾಯಕರು ತೆರಳಲು ಮುಂದಾದಾಗ ಅರ್ಧದಲ್ಲೇ ಪೊಲೀಸರು ನಾಯಕರನ್ನು ವಶಕ್ಕೆ ಪಡೆದುಕೊಂಡರು.
ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ವಿಚಾರವಾಗಿ ಶೆಡ್ಯೂಲ್ 9ಕ್ಕೆ ಸೇರಿಸುವಂತೆ ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.