ಡೈಲಿ ವಾರ್ತೆ:25 ಮಾರ್ಚ್ 2023

ರಾಜ್ಯವಿಧಾನಸಭೆ ಚುನಾವಣೆ: ಕಾಂಗ್ರೆಸ್‌ ನ ಮೊದಲ ಪಟ್ಟಿ ಬಿಡುಗಡೆ

ದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಪಕ್ಷದ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.
ಮೊದಲ ಪಟ್ಟಿಯಲ್ಲಿ 124 ಸ್ಥಾನಗಳಿಗೆ ಟಿಕೆಟ್‌ ಘೋಷಿಸಲಾಗಿದೆ.
ಪ್ರಮುಖವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ವರುಣಾ ಕ್ಷೇತ್ರದಿಂದ ಟಿಕೆಟ್‌ ನೀಡಲಾಗಿದೆ. ನಂಜನಗೂಡು ಕ್ಷೇತ್ರಕ್ಕೆ ಧ್ರುವನಾರಾಯಣ್‌ ಅವರ ಪುತ್ರ ದರ್ಶನ್‌ ಅವರಿಗೆ ಟಿಕೆಟ್‌ ನೀಡಲಾಗಿದೆ. ಕನಕಪುರ ಕ್ಷೇತ್ರದಿಂದ ಡಿಕೆಶಿ ಅವರು ಸ್ಪರ್ಧಿಸಲಿದ್ದಾರೆ. ದೇವನಹಳ್ಳಿ ಕ್ಷೇತ್ರದಿಂದ ಹೆಚ್.ಸಿ.ಮಹದೇವಪ್ಪ ಅವರಿಗೆ ಟಿಕೆಟ್‌ ನೀಡಲಾಗಿದೆ. ಗಾಂಧಿನಗರದಿಂದ ದಿನೇಶ್‌ ಗುಂಡೂರಾವ್‌, ಬಿಟಿಎಂ ಲೇಔಟ್‌ ನಿಂದ ರಾಮಲಿಂಗ ರೆಡ್ಡಿ, ರಾಮನಗರ ಕ್ಷೇತ್ರದಿಂದ ಇಕ್ಬಾಲ್‌ ಅವರಗೆ ಟಿಕೆಟ್‌ ನೀಡಲಾಗಿದೆ.
ಕಾಪು ಕ್ಷೇತ್ರಕ್ಕೆ ವಿನಯ್‌ ಕುಮಾರ್‌ ಸೊರಕೆ,
ಕುಂದಾಪುರ ಕ್ಷೇತ್ರಕ್ಕೆ ಎಂ.ದಿನೇಶ್‌ ಹೆಗ್ಡೆ, ಬೈಂದೂರು ಕ್ಷೇತ್ರದಿಂದ ಗೋಪಾಲ್‌ ಪೂಜಾರಿ ಅವರಿಗೆ ಟಿಕೆಟ್‌ ನೀಡಲಾಗಿದೆ.



ಕೋಲಾರ ಕ್ಷೇತ್ರದಿಂದ ಯಾರು ಸ್ಪರ್ಧಿಸುತ್ತಾರೆ ಎನ್ನುವುದನ್ನು ಇನ್ನು ರಿವೀಲ್‌ ಮಾಡಿಲ್ಲ.