ಡೈಲಿ ವಾರ್ತೆ:26 ಮಾರ್ಚ್ 2023

ಕರಾವಳಿ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮ: ದೇಶದಲ್ಲಿ ರೈತರು, ಕಾರ್ಮಿಕರು, ನಿರುದ್ಯೋಗಿಗಳು ಮತ್ತು ಭಾರತೀಯ ಸಂವಿಧಾನ ಅಪಾಯದಲ್ಲಿದೆ: ಬಿ ಕೆ ಹರಿಪ್ರಸಾದ್

ಬಂಟ್ವಾಳ : ದೇರಳಕಟ್ಟೆ ಗ್ರಾಮ ಪಂಚಾಯತ್ ಒಂದರ ವ್ಯಾಪ್ತಿಯಲ್ಲೇ 5 ಮೆಡಿಕಲ್ ಕಾಲೇಜುಗಳನ್ನು ಹೊಂದಿರುವ ನಮ್ಮ ಜಿಲ್ಲೆಗೆ ಗುಜರಾತ್, ಯು.ಪಿ. ಎಂದೂ ಮಾದರಿ ಅಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಹೇಳಿದರು.

ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಶನಿವಾರ ಸಂಜೆ ಪಾಣೆಮಂಗಳೂರು ಸಾಗರ್ ಹಾಲ್ ಬಳಿ ಹಮ್ಮಿಕೊಳ್ಳಲಾದ ಕರಾವಳಿ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದಲ್ಲಿ ಐಟಿ, ಬಿಟಿಗಳಂತಹ 50 ಕ್ಕೂ ಅಧಿಕ ಸಾರ್ವಜನಿಕ ಉದ್ಯಮಗಳ ಮೂಲಕ ಉದ್ಯೋಗ, ಕ್ಷೀರ ಕ್ರಾಂತಿ, 5200 ಅಣೆಕಟ್ಟುಗಳನ್ನು ಕಟ್ಟಿ ಹಸಿರು ಕ್ರಾಂತಿಯ ಮೂಲಕ ಜನತೆಗೆ ಸ್ವಾವಲಂಬಿ ಬದುಕು ನೀಡಿದ್ದರೆ ಅದು ಕಾಂಗ್ರೆಸ್ ಪಕ್ಷವಾಗಿದೆ ಎಂದರು.



ದೇಶದ ಕೋಟ್ಯಂತರ ಬಡವರಿಗಾಗಿ ಒಂದೇ ಒಂದು ಜನಪರ ಕಾರ್ಯಕ್ರಮ ಹಾಕಿಕೊಳ್ಳುವಲ್ಲಿ ವಿಫಲವಾಗಿರುವ ಬಿಜೆಪಿ ಸರ್ಕಾರ ಕೇವಲ ಭ್ರಷ್ಟಾಚಾರದಲ್ಲಿ ಮುಳುಗಿದ್ದು ಇದನ್ನು ಮರೆಮಾಚಲು ಹಿಂದುತ್ವ ಅಪಾಯದಲ್ಲಿದೆ ಎಂದು ಬೊಗಳೆ ಬಿಡುತ್ತಿದ್ದಾರೆ ಎಂದು ಆರೋಪಿಸಿದ ಬಿ.ಕೆ.ಹರಿಪ್ರಸಾದ್ ನಿಜವಾಗಿಯೂ ಈ ದೇಶದಲ್ಲಿ ರೈತರು, ಕಾರ್ಮಿಕರು, ನಿರುದ್ಯೋಗಿಗಳು ಮತ್ತು ಭಾರತೀಯ ಸಂವಿಧಾನ ಅಪಾಯದಲ್ಲಿದೆ ಎಂದರು.

ವಿಧಾನ ಪರಿಷತ್ ಸದಸ್ಯ, ದ ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಎಐಸಿಸಿ ಕಾರ್ಯದರ್ಶಿ ರೋಜಿ ಎಂ ಜಾನ್, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ ರಮಾನಾಥ ರೈ, ವಿಧಾನಪರಿಷತ್ ಸದಸ್ಯ ಡಾ ಮಂಜುನಾಥ ಭಂಡಾರಿ ಮಾತನಾಡಿದರು.

ಕೆಪಿಸಿಸಿ ಸದಸ್ಯರುಗಳಾದ ಪಿಯೂಸ್ ಎಲ್ ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಂ.ಎಸ್. ಮುಹಮ್ಮದ್, ಶ್ರೀಮತಿ ಅಪ್ಪಿ, ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ, ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುಹೈಲ್ ಖಂದಕ್, ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಸಂಯೋಜಕ ಅಲ್ಬರ್ಟ್ ಮಿನೇಜಸ್ ನರಿಕೊಂಬು, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಲಾರೆನ್ಸ್ ಡಿ.ಸೋಜ, ಅಸಂಘಟಿತ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಿ ಸಿ ರೋಡು, ಪಂಚಾಯತ್ ರಾಜ್ ಒಕ್ಕೂಟದ ದ.ಕ. ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, , ಎನ್.ಎಸ್.ಯು.ಐ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರುಗಳಾದ ಸುರೇಶ್ ಪೂಜಾರಿ ಜೋರಾ, ಇಬ್ರಾಹಿಂ ನವಾಝ್ ಬಡಕಬೈಲು, ಪಾಣೆಮಂಗಳೂರು ಬ್ಲಾಕ್ ಅಲ್ಪ ಸಂಖ್ಯಾತ ಘಟಕಾದ್ಯಕ್ಷ ಅರ್ಶದ್ ಸರವು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ, ಬಂಟ್ವಾಳ ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್ ಶಾಂತಿಅಂಗಡಿ, ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇದೇ ವೇಳೆ ರಮಾನಾಥ ರೈ ನೇತೃತ್ವದಲ್ಲಿ ಆಯೋಜಿಸಲಾದ ಸಾರ್ವಜನಿಕ ಸೌಹಾರ್ದ ಇಫ್ತಾರ್ ಕೂಟದಲ್ಲಿ ಧಾರ್ಮಿಕ ಮುಖಂಡ ಇರ್ಶಾದ್ ದಾರಿಮಿ ಅಲ್-ಜಝರಿ ಮಿತ್ತಬೈಲು ಭಾಗವಹಿಸಿದ್ದರು.

ಜಿ ಪಂ ಮಾಜಿ ಸದಸ್ಯ ಬಿ ಪದ್ಮಶೇಖರ ಜೈನ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ ಮಾಯಿಲಪ್ಪ ಸಾಲ್ಯಾನ್, ಬಂಟ್ವಾಳ ಪುರಸಭಾ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್, ಲೋಲಾಕ್ಷ ಶೆಟ್ಟಿ, ಬಿ ವಾಸು ಪೂಜಾರಿ, ಜನಾರ್ದನ ಚೆಂಡ್ತಿಮಾರ್, ಹಸೈನಾರ್ ತಾಳಿಪಡ್ಪು, ಬುಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಮುಡಿಪು ಬ್ಲಾಕ್ ಕಾಂಗ್ರೆಸ್ ವಕ್ತಾರ ಅಬ್ದುಲ್ ರಝಾಕ್ ಕುಕ್ಕಾಜೆ, ಸಜಿಪಮುನ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ ಯೂಸುಫ್ ಕರಂದಾಡಿ, ಪಾಣೆಮಂಗಳೂರು ವಲಯ ಕಾಂಗ್ರೆಸ್ ಅಧ್ಯಕ್ಷ ಪಿ ಎಸ್ ಮೊಹಮ್ಮದ್ ಇಕ್ಬಾಲ್, ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ ರೈ ಕುರ್ಲೆತ್ತಿಮಾರು, ಸಜಿಪಮೂಡ ವಲಯ ಕಾಂಗ್ರೆಸ್ ಅಧ್ಯಕ್ಷ ಎನ್ ಅಬ್ದುಲ್ ಕರೀಂ ಬೊಳ್ಳಾಯಿ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿ ಶರೀಫ್ ಭೂಯಾ, ನಾವೂರು ಗ್ರಾ ಪಂ ಅಧ್ಯಕ್ಷ ಉಮೇಶ್ ಕುಲಾಲ್ ನಾವೂರು, ಪುದು ಗ್ರಾ ಪಂ ಸದಸ್ಯ ಹಾಶೀರ್ ಪೇರಿಮಾರ್, ಪಕ್ಷ ಪ್ರಮುಖರಾದ ಸುದರ್ಶನ ಜೈನ್, ಕೃಷ್ಣಪ್ಪ ಪೂಜಾರಿ ನಾಟಿ, ಪಿ ಎ ರಹೀಂ, ರಾಜೇಶ್ ರೋಡ್ರಿಗಸ್, ಪ್ರವೀಣ್ ರೋಡ್ರಿಗಸ್ ವಗ್ಗ, ವೆಂಕಪ್ಪ ಪೂಜಾರಿ, ಬಿ ಮೋಹನ್, ಕೆ ಪದ್ಮನಾಭ ರೈ, ಚಂದ್ರಶೇಖರ ಪೂಜಾರಿ, ಸಂಜೀವ ಪೂಜಾರಿ ಬೊಳ್ಳಾಯಿ, ಶಬೀರ್ ಸಿದ್ದಕಟ್ಟೆ, ರಝಾಕ್ ಬಾಂಬಿಲ, ಉಮೇಶ್ ಬೋಳಂತೂರು, ರಿಯಾಝ್ ನೆಹರುನಗರ, ಪ್ರಶಾಂತ್ ಕುಲಾಲ್, ರಮೇಶ್ ಪಣೋಲಿಬೈಲು, ಶಮೀರ್ ನಂದಾವರ, ಅಬ್ದುಲ್ ಖಾದರ್ ಬಂಗ್ಲೆಗುಡ್ಡೆ, ಮಜೀದ್ ಬೋಗೋಡಿ ಮೊದಲಾದವರು ಭಾಗವಹಿಸಿದ್ದರು.

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಮಾಣಿ ಗ್ರಾ.ಪಂ. ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು.