ಡೈಲಿ ವಾರ್ತೆ:28 ಮಾರ್ಚ್ 2023

ಮಂಗಳೂರು:ಶಾರ್ಟ್ ಸರ್ಕ್ಯೂಟ್ ನಿಂದಾಗಿ ಐಸ್ ಕ್ರೀಂ ದಾಸ್ತಾನು ಕೇಂದ್ರದಲ್ಲಿ ಬೆಂಕಿ – ಕೋಟ್ಯಂತರ ರೂ.‌ನಷ್ಟ!

ಮಂಗಳೂರು: ಅಡ್ಯಾರ್ ನಲ್ಲಿರುವ ಪೋಲಾರ್ ಐಸ್ ಕ್ರೀಂ‌ ಸೂಪರ್ ಸ್ಟಾಕಿಸ್ಟ್ ಎಂಬ ನಂದಿನಿ ಐಸ್ ಕ್ರೀಂ ದಾಸ್ತಾನು ಕೇಂದ್ರಕ್ಕೆ ಇಂದು (ಮಾ.28) ಮುಂಜಾನೆ ಎರಡು ಗಂಟೆಯ ಸುಮಾರಿಗೆ ಬೆಂಕಿ ತಗಲಿ ಕೋಟ್ಯಂತರ ರೂ. ನಷ್ಟ ಸಂಭವಿಸಿದೆ. ಘಟನೆಯ ಪರಿಣಾಮ ವಾಹನ ಸೇರಿದಂತೆ ಸುಮಾರು 5 ಕೋ.ರೂ ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾಗಿವೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗಲಿದೆ ಎನ್ನಲಾಗಿದ್ದು, ಮೂರು ಅಗ್ನಿಶಾಮಕ ವಾಹನಗಳು ಸುಮಾರು ನಾಲ್ಕು ತಾಸು ಕಾರ್ಯಾಚರಣೆ ನಡೆಸಿ ಬೆಂಕಿ ನಿಯಂತ್ರಿಸಿವೆ.

ಕಾರವಾರದಿಂದ ಕಾಸರಗೋಡಿನವರೆಗೆ ನಂದಿನಿ ಐಸ್ ಕ್ರ್ರೀಂ ವಿತರಿಸುವ ಕೇಂದ್ರ ಇದಾಗಿದೆ.