ಡೈಲಿ ವಾರ್ತೆ:28 ಮಾರ್ಚ್ 2023

ಕಾಪು: ‘ಇದು ನನ್ನ ಕೊನೆ ಚುನಾವಣೆ’
ಜನಸೇವೆ ಮಾಡಲು 5 ವರ್ಷ ಅವಕಾಶ ನೀಡಿ – ವಿನಯ್ ಕುಮಾರ್ ಸೊರಕೆ

ಕಾಪು: “ಇದು ನನ್ನ ಕೊನೆಯ ಚುನಾವಣೆಯಾಗಿದ್ದು, ಈ ಬಾರಿ ನನ್ನನ್ನು ಸೋಲಿಸಿ ನಿವೃತ್ತಿ ಮಾಡಬೇಡಿ” ಎಂದು ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯಕುಮಾರ್ ಸೊರಕೆ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಕಾಪು ಕ್ಷೇತ್ರದಿಂದ ನನ್ನನ್ನು ಅಭ್ಯರ್ಥಿಯನ್ನಾಗಿ ಪಕ್ಷವು ಅವಕಾಶ ನೀಡಿದ್ದು, ಪಕ್ಷದ ಮುಖಂಡರ ಮತ್ತು ಕಾರ್ಯಕರ್ತರ ಒಗ್ಗಟ್ಟಿನ ಫಲವಾಗಿ ಈ ಅವಕಾಶ ನನಗೆ ಸಿಕ್ಕಿದೆ. ಜನಸೇವೆ ಮಾಡಲು 5 ವರ್ಷ ಅವಕಾಶ ನೀಡಿ ಎಂದು ಮತದಾರರಲ್ಲಿ ಮನವಿ ಮಾಡುತ್ತೇನೆ ಎಂದರು.

ಇನ್ನು ‘ಚುನಾವಣೆ ಘೋಷಣೆ ಮೊದಲೇ ನಮ್ಮ ಕೆಲಸ ಕಾರ್ಯವನ್ನು ಮಾಡಿದ್ದೇವೆ. 130 ಬೂತ್‌ಗಳಲ್ಲಿ ಸಭೆಯನ್ನು ನಡೆಸಲಾಗಿದೆ. ಪಕ್ಷದ ನಾಲ್ಕು ಪ್ರಮುಖ ಆಶ್ವಾಸನೆಯ ‘ಗ್ಯಾರಂಟಿ ಕಾರ್ಡ್‌’ ಅನ್ನು ಮನೆ ಮನೆಗೆ ತಲುಪಿಸಲಾಗಿದೆ. ಚುನಾವಣೆ ಘೋಷಣೆಯಾದ ಬಳಿಕ ಮತ್ತೆ ಬೂತ್ ಮಟ್ಟದಲ್ಲಿ ಪ್ರತಿ ಮನೆಯನ್ನು ತಲುಪಲು ನಮ್ಮ ಕಾರ್ಯಕರ್ತರು ತಯಾರಾಗಿದ್ದಾರೆ ಎಂದು ಹೇಳಿದ್ದಾರೆ.